ಸಿಹಿಹಂಚಿ, ಪಟಾಕಿ ಸಿಡಿಸಿ ಕೋರೆಗಾಂವ್ ವಿಜಯೋತ್ಸವ

1 ckm 5
ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ ದಲಿತ ಸಂಘರ್ಷ ಸಮಿತಿ ಹಾಗೂ ಸಮಾನ ಮನಸ್ಕರರ ಮುಖಂಡರು ಕೇಕ್ ಕತ್ತರಿಸಿ ಹಾಗೂ ಪಟಾಕಿ ಸಿಡಿಸುವ ಮುಖಾಂತರ ವಿಜಯೋತ್ಸವವನ್ನು ಸಂಭ್ರಮದಿAದ ಆಚರಿಸಿದರು. ಬಾಲಕೃಷ್ಣ ಬಿಳೇಕಲ್ಲು, ಮರ್ಲೆ ಅಣ್ಣಯ್ಯ, ಸಂತೋಷ್ ಲಕ್ಯಾ, ಹಿರೇಮಗಳೂರು ರಾಮಚಂದ್ರ, ಕೆ.ಟಿ.ರಾಧಾಕೃಷ್ಣ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ ದಲಿತ ಸಂಘರ್ಷ ಸಮಿತಿ ಹಾಗೂ ಸಮಾನ ಮನಸ್ಕರರ ಮುಖಂಡರು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಕೇಕ್ ಕತ್ತರಿಸಿ ಹಾಗೂ ಪಟಾಕಿ ಸಿಡಿಸುವ ಮುಖಾಂತರ ವಿಜಯೋತ್ಸವವನ್ನು ಅತ್ಯಂತ ಸಂಭ್ರಮದಿAದ ಆಚರಿಸಿದರು.

ಈ ವೇಳೆ ಮಾತನಾಡಿದ ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ , ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪನಿ ಮತ್ತು ಪೇಶ್ವೆಗಳ ನಡುವೆ ಭೀಮಾ ಕೋರೆಗಾಂವ್‌ನಲ್ಲಿ ಜನವರಿ ೧, ೧೮೧೮ರಲ್ಲಿ ಐತಿಹಾಸಿಕ ಯುದ್ದದಲ್ಲಿ ಐನೂರು ಮಂದಿ ದಲಿತ ಹೋರಾಟಗಾರರು ಆಹಾರ, ನೀರು ಹಾಗೂ ವಿಶ್ರಾಂತಿಯಿಲ್ಲದೆ ಸಾವಿರಾರು ಮಂದಿ ಸೈನ್ಯದ ವಿರುದ್ಧ ಕಾದಾಡಿದ ಕ್ಷಣವು ಎಲ್ಲರಿಗೂ ಸ್ಪೂರ್ತಿದಾಯಕ ಎಂದರು.

ಪರಿಶಿಷ್ಟರು, ಹಿಂದುಳಿದ ಮತ್ತು ಶೋಷಿತರ ಶೌರ್ಯದ ಸಂಕೇತವೇ ಭೀಮಾ ಕೋರೆಗಾಂವ್ ಯುದ್ಧವಾಗಿದೆ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲುಕೀಳುಗಳ ವಿರುದ್ಧ ನಿಂತು ಮಾನವೀಯ ವೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸುವ ಮಹಾರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟವಾಗಿದೆ ಎಂದು ಹೇಳಿದರು.

ಡಿಎಸ್‌ಸ್ ವಿಭಾಗೀಯ ಸಂಚಾಲಕ ಮರ್ಲೆ ಅಣ್ಣಯ್ಯ ಮಾತನಾಡಿ, ಕೋರೆಗಾಂವ್ ಯುದ್ದದಲ್ಲಿ ೩೦ ಸಾವಿರ ಪೇಶ್ವೆ ಸೈನಿಕರನ್ನು ಸೋಲಿಸಿದ ೫೦೦ ಮಹಾರ್ ಸೈನಿಕರ ಪೈಕಿ ೨೨ ಮಂದಿ ಸೈನಿಕರು ಮರಣ ಹೊಂದುತ್ತಾರೆ. ಅವರ ನೆನಪಿಗಾಗಿ ಭೀಮನದಿ ತೀರದಲ್ಲಿ ವಿಜಯಸ್ಥಂಭ ಸ್ಥಾಪಿಸಲಾಗಿದೆ. ಪ್ರತಿವರ್ಷ ಜ. ೧ರಂದು ಕೋರೆಗಾಂವ್ ವಿಜಯೋತ್ಸವ ಆಚರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಡಿಎಸ್‌ಎಸ್ ಮುಖಂಡರಾದ ಬಾಲಕೃಷ್ಣ ಬಿಳೇಕಲ್ಲು, ಸಂತೋಷ್ ಲಕ್ಯಾ, ಹಿರೇಮಗಳೂರು ರಾಮಚಂದ್ರ, ಹರಿಯಪ್ಪ, ಜವರಯ್ಯ, ವೀರಭದ್ರಯ್ಯ, ಪಿ.ಪರಮೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net