ಸೀ ಸಬಲೀಕರಣಕ್ಕೆ ಶಕ್ತಿ ಯೋಜನೆ ನೆರವು

bus stand
ರಾಜ್ಯಾದ್ಯಂತ ೫೦೦ ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿರುವ ಹಿನ್ನೆಲೆಯಲ್ಲಿ ಬೀದರ್‌ನಲ್ಲಿ ಸೋಮವಾರ ಸಿಹಿ ಹಂಚಿ ಸಂಭ್ರಮಿಸಲಾಯಿತು. ಅಮೃತರಾವ ಚಿಮಕೋಡೆ, ಶಿಲ್ಪಾ ಶರ್ಮಾ, ಡಾ.ಗಿರೀಶ್ ಬದೋಲೆ, ಚಂದ್ರಕಾಂತ ಫುಲೇಕರ್ ಇತರರಿದ್ದರು.
Published on

ಬೀದರ್: ಸೀಯರ ಸಬಲೀಕರಣಕ್ಕೆ ಶಕ್ತಿ ಯೋಜನೆ ಬಹಳಷ್ಟು ನೆರವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ ಹೇಳಿದರು.

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯಡಿ ರಾಜ್ಯಾದ್ಯಂತ ೫೦೦ ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿರುವ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಿ, ಸಿಹಿ ಹಂಚಿ ಮಾತನಾಡಿದ ಅವರು, ಮಹಿಳೆಯರು ಉಚಿತವಾಗಿ ಪ್ರವಾಸಿ ತಾಣ, ಧಾರ್ಮಿಕ ಸ್ಥಳಗಳ ಮತ್ತು ವ್ಯಾಪಾರ ವಹಿವಾಟುಗಳಿಗಾಗಿ ಪ್ರಯಾಣಿಸಿದ್ದಾರೆ. ಪ್ರಯಾಣದಿಂದ ಉಳಿದ ಹಣವನ್ನು ದೈನಂದಿನ ಜೀವನಕ್ಕೆ ಬಳಸಬಹುದಾಗಿದೆ ಮತ್ತು ಪುರುಷರಿಗೆ ಎಲ್ಲದಕ್ಕೂ ಅವಲಂಬಿತವಾಗಿರುವುದನ್ನು ತಪ್ಪಿಸಬಹುದು ಎಂದರು.

ಶಕ್ತಿ ಯೋಜನೆ ಆರಂಭದಿಂದ ಈವರೆಗೆ ಸಾರಿಗೆ ಸಂಸ್ಥೆಗಳ ಬಸ್‌ನಲ್ಲಿ ೫೦೦ ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಸಂಬಂಧ ೧೨,೬೬೯ ಕೋಟಿ ರೂ. ಸಂದಾಯ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಮತ್ತು ವಿಜಯಪುರ ಸೇರಿ ೭೨ ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿದ್ದು, ೨,೫೩೨ ಕೋಟಿ ರೂ. ಸಂದಾಯವಾಗಿದೆ. ಬೀದರ್ ಜಿಲ್ಲೆಯಲ್ಲಿ ೮.೬೫ ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಸಿದ್ದು, ೨೪೯ ಕೋಟಿ ರೂ. ಸಂದಾಯವಾಗಿದೆ. ಜಿಲ್ಲೆಯಲ್ಲಿ ದಿನಕ್ಕೆ ಸರಾಸರಿ ೧.೧೪ ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ ಎಂದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಶಕ್ತಿ ಯೋಜನೆಯಿಂದ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಪ್ರಯಾಣ ಮಾಡಲು ಅನುಕೂಲವಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ ಮಾತನಾಡಿ, ಶಕ್ತಿ ಯೋಜನೆಯಲ್ಲಿ ಉಚಿತವಾಗಿ ಪ್ರಯಾಣ ಮಾಡಿರುವ ಮಹಿಳೆಯರ ಮುಖದಲ್ಲಿ ಸಂತಸ ಕಾಣಬಹುದಾಗಿದೆ ಎಂದರು.

ನಗರಸಭೆ ಅಧ್ಯಕ್ಷ ಮಹ್ಮದ್ ಗೌಸ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪೂಜಾ ಜಾರ್ಜ್, ಸಮಿತಿ ತಾಲೂಕಾಧ್ಯಕ್ಷ ಎಂ.ಡಿ. ರಿಯಾಜ್, ಉಪಾಧ್ಯಕ್ಷ ರಾಜಕುಮಾರ ಮಡಿಗೆ, ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ ಫುಲೇಕರ್, ಸಂಚಾರ ಅಧಿಕಾರಿ ಇಂದ್ರಸೇನ್ ಎಂ. ಬಿರಾದಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net