

ಚಿಕ್ಕಮಗಳೂರು: ನ್ಯಾಯದ ಹರಿಕಾರ ಪ್ರವಾದಿ ಮಹಮದ್ ಪೈಗಂಬರ್‌ರವರ ಸಾರ್ವಕಾಲಿಕ ಬೋಧನೆಗಳನ್ನು ಜನತೆಗೆ ತಿಳಿಸಲು ಜಮಾತೆ ಇಸ್ಲಾಮಿ ಹಿಂದ್ ವತಿಯಿಂದ ಮಹಮದ್ ಪೈಗಂಬರ್ ಶೀರ್ಷಿಕೆಯಡಿ ಸೆ.೩ ರಿಂದ ೧೪ ರವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ರಿಜ್ವಾನ್ ಖಾಲಿದ್ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾದಿ ಮಹಮದ್ ಪೈಗಂಬರ್ ಅವರ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸಲು ಮತ್ತು ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಈ ಅಭಿಯಾನದ ಉz್ದೆÃಶವಾಗಿದೆ ಎಂದರು.
ಈ ಬಗ್ಗೆ ವಿವಿಧ ಧರ್ಮೀಯರ ನಡುವಿನ ಪರಸ್ಪರ ಸಂಬAಧಗಳನ್ನು ಗಟ್ಟಿಗೊಳಿಸುವುದು ಈ ಅಭಿಯಾನದ ಗುರಿಯಾಗಿದೆ ಎಂದ ಅವರು, ಇದರ ಅಂಗವಾಗಿ ಶಾಂತಿ ಪ್ರಕಾಶನ ಪ್ರಕಟಿಸಿರುವ ಪ್ರವಾದಿಯವರ ಬದುಕು ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ವಿವರಿಸಿದರು.
ಅಭಿಯಾನದ ಭಾಗವಾಗಿ ರಾಜ್ಯಾದ್ಯಂತ ವಿವಿಧ ಸಮಾಜ ಸೇವಾ ಚಟುವಟಿಕೆಗಳು, ಸಂವಾದ, ವಿಚಾರಗೋಷ್ಠಿ, ಸಾರ್ವಜನಿಕ ಸಭೆಗಳು, ಪ್ರಬಂಧ ಸ್ಪರ್ಧೆ ಮುಂತಾದ ಹಲವು ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದರು.
ಅಭಿಯಾನದ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಮುಸ್ಲಿಂ ಪ್ರಮುಖರೊಂದಿಗೆ ಸಂವಾದ, ಅನ್ಯ ಧರ್ಮೀಯರ ಮುಖಂಡರೊAದಿಗೆ ಸಂವಾದ, ಜನಸಾಮಾನ್ಯ ಹಾಗೂ ಪ್ರಮುಖರೊಂದಿಗೆ ಭೇಟಿ, ಚರ್ಚೆ, ಸೀರತ್ ಪ್ರವಚನ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಸ್ಥಾನೀಯ ಅಧ್ಯಕ್ಷ ಡಾ. ಮಹಮದ್ ಸಾಲಿಹ್, ಸಂಚಾಲಕರುಗಳಾದ ನಿವೃತ್ತ ಪ್ರಾಂಶುಪಾಲ ಗಫಾರ್ ಬೇಗ್, ನಸ್ರತ್ ನಹಿಮ್, ಇಕ್ಬಾಲ್ ಅಹಮದ್, ನಹಿಮ್ ಅಹಮದ್ ಉಪಸ್ಥಿತರಿದ್ದರು.