ಸುಂಟಿಕೊಪ್ಪದಲ್ಲಿ ಕ್ರಿಸ್ಮಸ್ ಸಂಭ್ರಮ

25sunti02
ಸುಂಟಿಕೊಪ್ಪ: ಸಂತ ಅಂತೋಣಿ ಚರ್ಚಿನಲ್ಲಿ ಕ್ರಿಸ್‌ಮಸ್ ಅಂಗವಾಗಿ ಗೋದಲಿಯನ್ನು ನಿರ್ಮಿಸಿದ್ದು ಗಮನ ಸೆಳೆಯಿತು.
Published on

ಸುಂಟಿಕೊಪ್ಪ: ಸಂತ ಅಂತೋಣಿ ಚರ್ಚಿನಲ್ಲಿ ಭಾನುವಾರ ದಿವ್ಯ ಬಲಿಪೂಜೆಯೊಂದಿಗೆ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಪ್ರಭು ಏಸು ಕ್ರಿಸ್ತರ ಜನನದ ಸ್ಥಳವಾದ ಗೋದಲಿಯನ್ನು ನಿರ್ಮಿಸಿದ್ದು ಗಮನ ಸೆಳೆಯಿತು.
ಶನಿವಾರ ಮಧ್ಯರಾತ್ರಿ 12 ಗಂಟೆಗೆ ಬಾಲಯೇಸುವನ್ನು ಪ್ರತಿಷ್ಠಾಪಿಸುವ ಮೂಲಕ ವಿಶೇಷ ಗಾಯನ, ಬಲಿ ಪೂಜೆಯನ್ನು ನೇರವೇರಿಸಲಾಯಿತು.
ಭಾನುವಾರ ಬೆಳಗ್ಗೆ ಧರ್ಮಗುರು ಫಾದರ್ ಅರುಳ್‌ಸೆಲ್ವಕುಮಾರ್, ಸಂತ ಕ್ಲಾರಾ ಕಾನ್ವೆಂಟಿನ ಕನ್ಯಾಸ್ತ್ರೀಯರು ಪಾರ್ಥನೆಯಲ್ಲಿ ಭಾಗವಹಿಸಿದ್ದರು. ಸಮುದಾಯದ ಭಕ್ತರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಇದೇ ಸಂದರ್ಭ ವಿವಿಧ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net