ಸುಗಮವಾಗಿ ನೆರವೇರಿದ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ

Published on

ಚಾಮರಾಜನಗರ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಶನಿವಾರ ಸುಗಮ ರೀತಿಯಲ್ಲಿ ನಡೆಯಿತು.

ನಗರದ ಸತ್ತಿ ರಸ್ತೆಯಲ್ಲಿರುವ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಶಂಕರಪುರ ಚನ್ನಿಪುರಮೋಳೆ ರಸ್ತೆಯಲ್ಲಿರುವ ಸೇವಾಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಿತು. ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಸಮಯಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳು ತಮ್ಮ ಕೊಠಡಿ ಹಾಗೂ ಪ್ರವೇಶ ಪತ್ರದ ಸಂಖ್ಯೆಯನ್ನು ಹುಡುಕುತ್ತಿದ್ದ ದೃಶ್ಯಗಳು ಕಂಡುಬಂದಿತು. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿತ್ತು. ಪರೀಕ್ಷೆ ಕೇಂದ್ರದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net