ಸುತ್ತಲಿನ ಪ್ರದೇಶ ಸ್ವಚ್ಛವಾಗಿಟ್ಟುಕೊಳ್ಳಿ

Published on

ಬಳ್ಳಾರಿ : ಆರೋಗ್ಯಕರ ಜೀವನ ನಡೆಸಲು ಅಕ್ಕ-ಪಕ್ಕದ ಪ್ರದೇಶವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು ಎಂದು ನ್ಯಾಯಾಧೀಶ ವಿದ್ಯಾಧರ್ ಶಿರಹಟ್ಟಿ ಹೇಳಿದರು.
ನಗರದ ಹೊಸ ನ್ಯಾಯಾಲಯ ಬಳಿಯ ಕ್ವಾಟ್ರಸ್ ಉದ್ಯಾನವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಮಹಾನಗರ ಪಾಲಿಕೆ ಇವರ ಸಹಯೋಗದೊಂದಿಗೆ ‘ಅ.02 ಗಾಂಧಿ ಜಯಂತಿ ಹಾಗೂ ಸ್ವಚ್ಛತಾ-ಹಿ-ಸೇವಾ ಅಭಿಯಾನ 2024’ರ ಅಂಗವಾಗಿ ‘ಸ್ವಭಾವ ಸ್ವಚ್ಛತಾ-ಸಂಸ್ಕಾರ ಸ್ವಚ್ಛತಾ’ ಎನ್ನುವ ಘೋಷವಾಕ್ಯದಡಿಯಲ್ಲಿ ಶನಿವಾರ ನಡೆದ ಸ್ವಚ್ಛತಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಾತ್ಮ ಗಾಂಧಿ ಜಯಂತಿಯ ನಿಮಿತ್ತ ರಾಷ್ಟ್ರೀಯ ಸ್ವಚ್ಚತಾ ದಿನ ಅಂಗವಾಗಿ ಸೆಪ್ಟಂಬರ್ 14 ರಿಂದ ಅಕ್ಟೋಬರ್ 2 ರ ವರೆಗೆ ಸ್ವಭಾವ ಸ್ವಚ್ಚತಾ ಸಂಸ್ಕಾರ ಸ್ವಚ್ಚತಾ (ಸ್ವಚ್ಚತೆಯೇ ಸೇವೆ) ಅಭಿಯಾನವನ್ನು ಹಮ್ಮಿಕೊಂಡಿದ್ದು, ಜಿಲ್ಲಾ-ತಾಲೂಕು ನ್ಯಾಯಾಲಯಗಳಲ್ಲಿ ಪ್ರತಿದಿನ ಸ್ವಚ್ಚತಾ ಕಾರ್ಯಕ್ರಮದಲ್ಲಿ ತೊಡಗಿಕೊಂಡು ಶುಚಿತ್ವಕ್ಕೆ ಮಹತ್ವ ನೀಡಲಾಗಿದೆ ಎಂದರು.

ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ನ್ಯಾಯಧೀಶರಾದ ಸಿದ್ಧಲಿಂಗ ಪ್ರಭು ಮಾತನಾಡಿ, ಈ ದಿನ ಹಮ್ಮಿಕೊಂಡಿರುವ ಸ್ವಚ್ಚತಾ ಕಾರ್ಯಕ್ರಮದಲ್ಲಿ ನ್ಯಾಯಾಲಯದ ನ್ಯಾಯಧೀಶರೂ, ಸಿಬ್ಬಂದಿ ಸೇರಿದಂತೆ ನೂರು ಜನಕ್ಕೂ ಮಿಗಿಲಾಗಿ ಭಾಗವಹಿಸಿದ್ದು, ಸ್ವಚ್ಛತಾ ಕಾರ್ಯದಲ್ಲಿ ಉತ್ಸುಕತೆಯಿಂದ ಭಾಗವಹಿಸಿ ಉದ್ಯಾನವನ ಸ್ವಚ್ಚಗೊಳಿಸಿದ್ದಾರೆ ಎಂದರು. ಪ್ರತಿವಾರವೂ ಸ್ವಚ್ಚತಾ ಕಾರ್ಯ ಕೈಗೊಂಡು, ಮುಂಬರುವ ದಿನಗಳಲ್ಲಿ ಉದ್ಯಾನವನದ ಆವರಣದಲ್ಲಿ ಹೂ-ಹಣ್ಣು ಗಿಡಗಳನ್ನು ನೆಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಧೀಶ ರಾಜೇಶ್.ಎನ್ ಹೊಸಮನೆ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net