ಸುತ್ತಿಗೆಯಿಂದ ಹೊಡೆದು ಬರ್ಬರ ಹತ್ಯೆ

IMG-20221013-WA0019
Published on

ಹಾವೇರಿ: ಸುತ್ತಿಗೆಯಿಂದ ತಲೆಗೆ ಹೊಡೆದು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ತಾಲೂಕಿನ ನಾಗನೂರು ಕ್ರಾಸ್ ಬಳಿ ಗುರುವಾರ ನಡೆದಿದೆ.
ಹಾನಗಲ್ಲ ತಾಲೂಕಿನ ಮಾಸನಕಟ್ಟಿ ಗ್ರಾಮದ ಮಹಾದೇವಪ್ಪ ಕುರುವತ್ತಿ (52) ಹತ್ಯೆಯಾದವರು. ನಾಗನೂರು ಕ್ರಾಸ್ ಬಳಿ ಇರುವ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಸರ್ವೀಸ್ ರಸ್ತೆಯಲ್ಲಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಶ್ವಾನದಳ ಸಿಬ್ಬಂದಿ ಭೇಟಿ, ಪರಿಶೀಲಿಸಿದರು. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಹಾವೇರಿ ಗ್ರಾಮೀಣ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net