

ಚಿತ್ರದುರ್ಗ: ಸ್ಪರ್ಧಾತ್ಮಕ ಜಗತ್ತನ್ನು ಎದುರಿಸಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ಡಯಟ್‌ನಲ್ಲಿ ಮಂಗಳವಾರ ಸಿರಿಧಾನ್ಯಗಳು-ಅದ್ಭುತ ಆಹಾರ/ರೂಢಿಗತ ಪಥ್ಯಾಹಾರ ವಿಷಯ ಕುರಿತು ಆಯೋಜಿಸಿದ್ದ ರಾಜ್ಯಮಟ್ಟದ ವಿಜ್ಞಾನ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದರು.
ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಶಿಕ್ಷಕರು, ಪಾಲಕರು ಪ್ರೋತ್ಸಾಹಿಸಬೇಕು. ಇದಕ್ಕಾಗಿ ಶಿಕ್ಷಣ ಇಲಾಖೆ ಅನೇಕ ಚಟುವಟಿಕೆಗಳನ್ನು ರೂಪಿಸಿದೆ. ಸೋಲು, ಗೆಲುವು ಮುಖ್ಯವಲ್ಲ, ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ಹೇಳಿದರು.
ಏಕಾಗ್ರತೆ, ಪರಿಶ್ರಮದಿಂದ ಯಶಸ್ಸು ಸಾಧ್ಯ. ಉತ್ತಮ ಆರೋಗ್ಯಕ್ಕಾಗಿ ಸಿರಿಧಾನ್ಯಗಳ ಬಳಕೆ ಅಗತ್ಯವಿದೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವ ಜತೆಗೆ ಸಂಸ್ಕಾರ ಕಲಿಸುವುದು ಶಿಕ್ಷಕರು, ಪಾಲಕರ ಜವಾಬ್ದಾರಿಯಾಗಿದೆ ಎಂದರು.
ಡಯಟ್ ಪ್ರಾಂಶುಪಾಲ ಎಂ.ನಾಸಿರುದ್ದೀನ್ ಮಾತನಾಡಿ, ಮನುಷ್ಯನಿಗೆ ಆರೋಗ್ಯವೇ ನಿಜವಾದ ಸಂಪತ್ತು. ಒತ್ತಡದ ಬದುಕು ಅನೇಕ ರೋಗಗಳಿಗೆ ಕಾರಣವಾಗುತ್ತಿದೆ ಎಂದರು.
ಸಿಟಿಇ ಪ್ರವಾಚಕ ಜಿ.ಆರ್.ತಿಪ್ಪೇಶಪ್ಪ, ಉರ್ದು ಮತ್ತು ಇತರೆ ಭಾಷಾ ಅಲ್ಪಸಂಖ್ಯಾತ ನಿರ್ದೇಶನಾಲಯದ ಉಪನಿರ್ದೇಶಕ ಪ್ರಭುಸ್ವಾಮಿ, ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದ ಶಿಕ್ಷಣ ಅಧಿಕಾರಿ ಪ್ರಶಾಂತ್‌ಕುಮಾರ್ ಬಿಸ್ವಾಲ್, ಡಯಟ್ ಉಪ ಪ್ರಾಂಶುಪಾಲ ಸಿ.ಎಸ್.ವೆಂಕಟೇಶಪ್ಪ, ನೋಡಲ್ ಅಧಿಕಾರಿ ಬಿ.ಎಸ್.ನಿತ್ಯಾನಂದ, ಹಿರಿಯ ಉಪನ್ಯಾಸಕರಾದ ಎಸ್.ಸಿ.ಪ್ರಸಾದ್, ಜ್ಞಾನೇಶ್ವರ, ಆರ್.ನಾಗರಾಜು, ಎನ್.ರಾಘವೇಂದ್ರ, ಎಸ್.ಬಸವರಾಜು, ಕೆ.ಜಿ.ಪ್ರಶಾಂತ್, ಸಿ.ಎಸ್.ಲೀಲಾವತಿ, ವಿ.ಕನಕಮ್ಮ, ಸಿದ್ದೇಶಿ, ತಾಂತ್ರಿಕ ಸಹಾಯಕರಾದ ಕೆ.ಆರ್.ಲೋಕೇಶ್, ಆರ್.ಲಿಂಗರಾಜು, ತೀರ್ಪುಗಾರರಾದ ಡಾ.ಸರಸ್ವತಿ, ಪುಟ್ಟರಂಗಪ್ಪ,ನಾಗೇಂದ್ರಚಾರಿ, ಮೂರ್ತಾಚಾರ್, ಹಾಲೇಶಿ ಇದ್ದರು. 35 ಶೈಕ್ಷಣಿಕ ಜಿಲ್ಲೆಯ ವಿದ್ಯಾರ್ಥಿಗಳು ಕಾರ‌್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಂಗಳೂರು ಉರ್ದು ಮತ್ತು ಇತರೆ ಭಾಷಾ ಅಲ್ಪಸಂಖ್ಯಾತರ ನಿರ್ದೇಶನಾಲಯ, ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದ ಸಂಯುಕ್ತಾಶ್ರಯದಲ್ಲಿ ವಿಚಾರಗೋಷ್ಠಿ ಆಯೋಜಿಸಲಾಗಿತ್ತು.