ಸುಪ್ರಿಂ ಕೋರ್ಟ್ ಮೊರೆ ಹೋಗುತ್ತೇನೆ: ಸ್ನೇಹಮಯಿ ಕೃಷ್ಣ

Snehamayi Krishna
Published on

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲನ ಅಕ್ರಮ ಸಂಬಂಧಿಸಿದ ಪ್ರಕರಣ ಸಂಬಂಧಿಸಿದ ಹೋರಾಟವನ್ನು ಇಲ್ಲಿಗೆ ಕೈಬಿಡದೇ ಸುಪ್ರಿಂ ಕೋರ್ಟ್ ಮೊರೆ ಹೋಗುತ್ತೇನೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದಕ್ಕೆ ಹೈಕೋರ್ಟ್ ನಿರಾಕರಿಸಿದೆ. ಹಾಗಾಗಿ, ಸುಪ್ರೀಂಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದೇನೆ ಎಂದರು.

ಮುಡಾದಲ್ಲಿನ ಅಕ್ರಮವಗಳ ಬಗ್ಗೆ ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ನಡೆದಿಲ್ಲ. ಹಾಗಾಗಿ ಮುಡಾ ಅಕ್ರಮಗಳ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದೆ. ಆದರೆ, ನ್ಯಾಯಾಲಯ ಲೋಕಾಯುಕ್ತ ನೀಡಿರುವ ತನಿಖಾ ವರದಿಯನ್ನು ಪರಿಗಣಿಸಿದಂತಿದೆ. ಹಾಗಾಗಿ, ಸಿಬಿಐ ತನಿಖೆಯ ಅಗತ್ಯವಿಲ್ಲ ಎಂದಿರಬಹುದು. ನ್ಯಾಯಾಲಯದ ಆದೇಶದ ಪ್ರಕಾರ ಬೇರೊಂದು ತನಿಖಾ ಸಂಸ್ಥೆಯಿಂದ ಮತ್ತೊಮ್ಮೆ ತನಿಖೆಯ ಅಗತ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ ಇದೇ ನ್ಯಾಯಾಲಯದ ಅಂತಿಮ ತೀರ್ಪಲ್ಲ. ಮುಡಾದಲ್ಲಿ ನಡೆದಿರುವ ಅಕ್ರಮಗಳ ಕುರಿತು ನ್ಯಾಯಾಲಯ ಅಂತಿಮ ತೀರ್ಪು ನೀಡಬೇಕಿದೆ. ಹೈಕೋರ್ಟ್ ನಿಲುವು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇನೆ. ಸರ್ವೋಚ್ಛ ನ್ಯಾಯಾಲಯದಲ್ಲಿ ನನಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net