ಸುಪ್ರೀಂಕೋರ್ಟ್‌ಗೆ ಮೊರೆ ಹೋಗುವಂತೆ ಒತ್ತಾಯ

dvg kuruburu shantakumar sep 16
Published on

ಮೈಸೂರು: ಕಾವೇರಿ ನದಿ ಮೂಲಕ ತಮಿಳುನಾಡಿಗೆ 15 ದಿನಗಳು ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸೂಚಿಸಿರುವ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಕ್ರಮ ಸರಿಯಲ್ಲ. ಈ ಕುರಿತು ಸುಪ್ರೀಂಕೋರ್ಟ್‌ಗೆ ಮೊರೆ ಹೋಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.


ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಶೇ.64 ರಷ್ಟು ಮಳೆ ಪ್ರಮಾಣ ಕಡಿಮೆಯಾಗಿದೆ. ಈಗಾಗಲೇ ಜಲಾಶಯಗಳಲ್ಲಿ ನೀರು ಖಾಲಿಯಾಗಿದೆ. ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 100, ಕಬಿನಿ ಜಲಾಶಯದ ನೀರಿನ ಮಟ್ಟ 72 ಅಡಿಗೆ ಇಳಿದಿದ್ದು, ಕುಡಿಯುವ ನೀರಿಗೂ ಸಂಕಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಕಟಣೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.


ಇಂತಹ ಸಂದರ್ಭದಲ್ಲಿ ಪ್ರಾಧಿಕಾರ ನೀರು ಬಿಡಲು ಹೇಗೆ ಸೂಚನೆ ನೀಡಿತು? ಇದು ಸರಿಯಾದ ಕ್ರಮವಲ್ಲ. ಈ ತೀರ್ಮಾನದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮರು ಪರಿಶೀಲನಾ ಮನವಿ ಸಲ್ಲಿಸಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂಬುದಾಗಿ ವಾದ ಮಂಡಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net