ಸುಬ್ರಹ್ಮಣ್ಯಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ಕಾವೇರಿ ನದಿಯಲ್ಲಿ ಪವಿತ್ರ ಸ್ನಾನ

ಸುಬ್ರಹ್ಮಣ್ಯಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ಕಾವೇರಿ ನದಿಯಲ್ಲಿ ಪವಿತ್ರ ಸ್ನಾನ
Published on

ಅರಕಲಗೂಡು: ತಾಲೂಕಿನ ರಾಮನಾಥಪುರ ಪ್ತಸನ್ನ ಸುಬ್ರಹ್ಮಣ್ಯಸ್ವಾಮಿ ಜಾತ್ರಾ ಮಹೋತ್ಸದಲ್ಲಿ ಭಾನುವಾರ ಅಪಾರ ಭಕ್ತರು ಸಂಭ್ರಮದಿಂದ ಪಾಲ್ಗೊಂಡು ಭಕ್ತಿ ಪರಾಕಾ?್ಠೆ ಮೆರೆದರು.


ಸಾರ್ವತ್ರಿಕ ರಜಾ ದಿನವಾದ ಕಾರಣ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬೆಳಗಿನಿಂದ ಸಂಜೆತನಕ ಜಾತ್ರೆಯಲ್ಲಿ ಭಕ್ತರ ಕಲವರ ಕಳೆಗಟ್ಟಿತ್ತು. ಕಾವೇರಿ ನದಿಯಲ್ಲಿ ಪವಿತ್ರ ಸ್ನಾನ ಮಾಡಿದರು. ಹರಕೆ ಹೊತ್ತ ಭಕ್ತರು ತಲೆಮುಡಿ ಅರ್ಪಿಸಿ ದೇವಸ್ಥಾನದ ಪೂಜಾ ಕಾರ್ಯಗಳಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಹಣ್ಣು ತುಪ್ಪ ನೈವೃದ್ಯ ಅರ್ಪಿಸಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಧನ್ಯತಾ ಭಾವ ಹೊಂದಿದರು.

ಜಾತ್ರೆಯಲ್ಲಿ ವಿವಿಧ ಸಿಹಿ ತಿನಿಸುಗಳು, ಮನೆ ಬಳಕೆ ವಸ್ತುಗಳು, ಮಕ್ಕಳ ಆಟಿಕೆ ಸಾಮಾನುಗಳನ್ನು ಖರೀದಿಸಿ ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net