ಚಾಮರಾಜನಗರ: ಕಬ್ಬು ಕಟಾವು ಮಾಡುತ್ತಿದ್ದ ಜಮೀನೊಂದರಲ್ಲಿ ಭಾರಿಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ಸೆರೆ ಹಿಡಿದು ರಕ್ಷಣೆ ಮಾಡಲಾಗಿದೆ.
ನಗರದ ಕರಿನಂಜನಪುರ ಗ್ರಾಮದ ಮಣಿ ಎಂಬುವವರ ಜಮೀನಿನಲ್ಲಿ ಮಂಗಳವಾರ ಕಬ್ಬು ಕಟಾವು ಮಾಡುತ್ತಿದ್ದ ವೇಳೆಯಲ್ಲಿ ಕೂಲಿ ಕಾರ್ಮಿಕರಿಗೆ ಭಾರಿ ಗಾತ್ರ ಹೆಬ್ಬಾವು ಕಾಣಿಸಿಕೊಂಡಿದೆ. ಈ ವೇಳೆ ಸ್ಥಳೀಯರು ಸ್ನೇಕ್ ಅಶೋಕ್ ಅವರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಅಶೋಕ್ ಅವರು ಸುಮಾರು 13 ಅಡಿ ಉದ್ದದ 30-40 ಕೆಜಿ ತೂಕದ ಹೆಬ್ಬಾವನ್ನು ರಕ್ಷಣೆ ಮಾಡುವ ಮೂಲಕ ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.