ಸುರಕ್ಷತೆ ದೃಷ್ಟಿಯಿಂದ ಹೆಲ್ಮೆಟ್ ಧರಿಸಿ

21Kush04
ಸುಂದರನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮದಲ್ಲಿ ಬಿ.ಎಂ.ಪ್ರವೀಣ್ ಕುಮಾರ್ ಮಾತನಾಡಿದರು. ಡಿವೈಎಸ್ಪಿ ಗಂಗಾಧರಪ್ಪ, ಕೆ.ಬಿ.ಮೋಹನ್, ಎಸ್.ಕೆ.ಮಂಜುನಾಥ್, ಎಚ್.ಟಿ.ಗೀತಾ, ಚಂದ್ರಪ್ಪ, ಕೆ.ಬಿ.ಶಂಶುದ್ಧೀನ್ ಇದ್ದರು.
Published on

ಕುಶಾಲನಗರ: ಪೊಲೀಸರ ಭಯಕ್ಕೆ ಹೆಲ್ಮೆಟ್ ಧರಿಸುವ ಬದಲು ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಿ ಎಂದು ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇಲ್ಲಿನ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಸುಂದರನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.

ವಕೀಲ ಕೆ.ಬಿ.ಮೋಹನ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಎಚ್.ಟಿ.ಗೀತಾ ಮಾತನಾಡಿದರು. ಸುಂದರನಗರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ಎಂ.ಪ್ರವೀಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಸಂಚಾರಿ ನಿಯಮಗಳನ್ನು ತಿಳಿಸುವ 10 ನಿಮಿಷದ ವಿಡಿಯೋ ಪ್ರದರ್ಶನ ಮಾಡಲಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಸುನೀಲ್ ಕುಮಾರ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಎಚ್.ಜೆ. ಚಂದ್ರಪ್ಪ, ವಕೀಲ ಎಸ್.ಕೆ.ಮಂಜುನಾಥ್, ಕೂಡುಮಂಗಳೂರು ಗ್ರಾ.ಪಂ ಸದಸ್ಯರು ಹಾಗೂ ಪತ್ರಕರ್ತ ಕೆ.ಬಿ.ಶಂಶುದ್ಧೀನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net