

ಚಿತ್ರದುರ್ಗ: ಗರ್ಭಿಣಿಯರು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸುವ ಮೂಲಕ ತಾಯಿ ಮರಣವನ್ನು ತಪ್ಪಿಸಬಹುದಾಗಿದೆ ಎಂದು ತಾಲೂಕ ಆರೋಗ್ಯಅಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು
ಚಿತ್ರದುರ್ಗ ತಾಲೂಕು ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಏರ್ಪಡಿಸಿದ್ದ ಸುರಕ್ಷಿತ ಮಾತೃತ್ವ ಅಭಿಯಾನದಲ್ಲಿ ಮಾ ತನಾಡಿದ ಅವರು,ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ತಿಂಗಳು 9ನೇ ತಾರೀಖಿನಂದು ಈ ಅಭಿಯಾನ ಕಾರ್ಯಕ್ರಮ ನಡೆಯುತ್ತದೆ. ಗರ್ಭಿಣಿಯರು ಆರೋಗ್ಯ ತಪಾಸಣೆಯೊಂದಿಗೆ ಸೂಕ್ತ ಚಿಕಿತ್ಸೆ ಪಡೆಯಬೇಕು. ಒಂದು ಲಕ್ಷ ಜೀವಂತ ಜನನಕ್ಕೆ,ರಾಜ್ಯದಲ್ಲಿ ತಾಯಿ ಮರಣ ದರ 70 ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ತಾಯಿ ಮರಣ ದರ 69 ಇದೆ ಎಂದರು.
ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ,ಮಕ್ಕಳ ತಜ್ಞ ಡಾ.ತಿಮ್ಮೇಗೌಡ, ಹೆರಿಗೆ ಮತ್ತು ಸ್ತ್ರೀರೋಗ ತಜ್ಞೆ ಡಾ.ಪವಿ ತ್ರಾ,ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್,ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿದರು. ವೈ ದ್ಯರಾದ ಡಾ.ತುಳಸಿರಂಗನಾಥ್,ಮೋಹನ್‌ಕುಮಾರ್,ತಾರಾ,ಪರ್ವೀನ್,ಸುಶೀಲಾ ಮತ್ತಿತರರು ಇದ್ದರು.