

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಶಾಂತಿನಗರದಲ್ಲಿ ಗುರುವಾರ ಬೆಳಗ್ಗೆ ಶೂಟೌಟ್ ನಡೆದಿದ್ದು, ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಅಪರಿಚಿತ ವ್ಯಕ್ತಿಗಳು ನಡೆಸಿದ ಶೂಟೌಟ್ ನಿಂದ ಸುಳ್ಯ ನಗರದ ಜನತೆ ಬೆಚ್ಚಿ ಬಿದ್ದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಕೊಲೆ ಪ್ರಕರಣವೊಂದರ ಆರೋಪಿ ಎಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಾಗಿದೆ. ಘಟನಾ ಸ್ಥಳಕ್ಕೆಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.