

ಚಾಮರಾಜನಗರ: ತಾಲೂಕಿನ ಅಟ್ಟುಗೂಳಿಪುರ ಸಮೀಪದಲ್ಲಿರುವ ಸುವರ್ಣಾವತಿ ಜಲಾಶಯದಿಂದ 200 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ.
ಜಿಲ್ಲೆಯ ವಿವಿಧೆಡೆ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಸೋಮವಾರ 200 ಕ್ಕಿಂತಲೂ ಅಧಿಕ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. ಸುವರ್ಣಾವತಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆ ಮುಂದುವರೆದಲ್ಲಿ ಹೊರಬಿಡುವ ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಳ ಮಾಡಲಾಗುತ್ತದೆ.
ಈ ನಿಟ್ಟಿನಲ್ಲಿ ಸುವರ್ಣಾವತಿ ಜಲಾಶಯ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿ ಹಾಗೂ ನದಿಪಾತ್ರದಲ್ಲಿ ಬರುವ ರೈತರು, ಸುತ್ತಮುತ್ತಲ ಗ್ರಾಮಸ್ಥರು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಆಸ್ತಿ-ಪಾಸ್ತಿ ಮತ್ತು ಜಾನುವಾರುಗಳ ಬಗ್ಗೆ ನಿಗಾ ವಹಿಸಬೇಕೆಂದು ಕಾವೇರಿ ನೀರಾವರಿ ನಿಗಮದ ಕಬಿನಿ ನಾಲೆಗಳ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಕೋರಿದ್ದಾರೆ.