ಸುಸಂಸ್ಕೃತರನ್ನಾಗಿಸುವ ಶಕ್ತಿ ಶಿಕ್ಷಣಕ್ಕಿದೆ

ಫೋಟೋ ಶೀರ್ಷಿಕೆ 06 ಸಿಆರ್_ಪಿ-1 ಎ
ಚನ್ನರಾಯಪಟ್ಟಣದಲ್ಲಿನ ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಯ ಸಮಾರೋಪ ಸಮಾರಂಭದಲ್ಲಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿದರು. ಡಾ.ಇ.ಎಸ್.ಚಕ್ರವರ್ತಿ, ಡಾ.ಎಂ.ಕೆ.ಮಂಜುನಾಥ ಇತರರಿದ್ದರು.
Published on


ಚನ್ನರಾಯಪಟ್ಟಣ: ಚಾರಿತ್ರೃವಂತರನ್ನಾಗಿ ಮಾಡುವ, ಮಾನಸಿಕ, ಬೌದ್ಧಿಕ, ಆಧ್ಯಾತ್ಮಿಕ ಶಕ್ತಿಯನ್ನು ವೃದ್ಧಿಸುವ ಮೂಲಕ ಸುಸಂಸ್ಕೃತರನ್ನಾಗಿಸುವ ಶಕ್ತಿ ಶಿಕ್ಷಣಕ್ಕಿದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಪಟ್ಟಣದ ಅದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಆಧ್ಯಾತ್ಮಿಕ ಶಕ್ತಿಯ ಜತೆ ಜ್ಞಾನವನ್ನು ಹೆಚ್ಚಿಸಿಕೊಂಡರೆ ಬದುಕಿನಲ್ಲಿ ಯಶಸ್ಸು ಕಾಣಬಹುದು. ತಂದೆ, ತಾಯಿ, ಗುರು, ಹಿರಿಯರಿಗೆ ಗೌರವ ನೀಡಬೇಕು. ಮನುಷ್ಯ ಹುಟ್ಟು ಮತ್ತು ಸಾವಿನ ನಡುವೆ ತನ್ನ ಬದುಕಿನ ಸಾರ್ಥಕತೆಗಾಗಿ ಕಲಿಯುವ ಮಾಧ್ಯಮ ಶಿಕ್ಷಣವೆಂದರು.

ಸಂಪನ್ಮೂಲ ವ್ಯಕ್ತಿ ಡಾ.ಇ.ಎಸ್.ಚಕ್ರವರ್ತಿ ಮಾತನಾಡಿ, ಉತ್ತಮ ಶಿಕ್ಷಣದಿಂದ ಜ್ಞಾನವಂತರಾಗುವ ಮೂಲಕ ಸಮಾಜಕ್ಕೆ ಆಸ್ತಿಯಾಗಬೇಕು. ಪದವಿ ಪಡೆದ ನಂತರವೂ ಜೀವನದುದ್ದಕ್ಕೂ ಕಲಿಕೆ ನಿರಂತರವಾಗಿರುತ್ತದೆ. ಬೇರೆಯವರಿಗೆ ತೊಂದರೆ ನೀಡದೆ, ಎಲ್ಲರಿಗೂ ಗೌರವ ನೀಡುವ ಮೂಲಕ ಪ್ರೀತಿ, ವಿಶ್ವಾಸದಿಂದ ಕಾಣಬೇಕು ಎಂದು ಹೇಳಿದರು.

ಶಿಕ್ಷಣ ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎನ್.ಎಸ್.ರಾಮೇಗೌಡ ಮಾತನಾಡಿ, ಶಿಕ್ಷಣ ಸಂಸ್ಥೆಯು ವಾರ್ಷಿಕ ಯೋಜನೆ ರೂಪಿಸಿಕೊಂಡು ಅವುಗಳನ್ನು ಕಾರ್ಯಗತಗೊಳಿಸುವುದರಿಂದ ಯಶಸ್ಸು ಲಭಿಸುತ್ತದೆ. ಪಠ್ಯ ಮತ್ತು ಪತ್ಯೇತರ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಕ್ರಿಯಾಶೀಲರಾಗಬೇಕು ಎಂದು ಹೇಳಿದರು.

ಆದಿಚುಂಚನಗಿರಿ ಶಾಖಾ ಮಠಾಧೀಶ ಶಂಭುನಾಥಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾಲೇಜು ಪ್ರಾಂಶುಪಾಲ ಡಾ.ಎಂ.ಕೆ.ಮಂಜುನಾಥ ವರದಿ ವಾಚಿಸಿದರು. ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು, ರೆಡ್‌ಕ್ರಾಸ್, ಎನ್‌ಎಸ್‌ಎಸ್, ಎನ್‌ಸಿಸಿ ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಹಾಯಕ ಪ್ರಾಧ್ಯಾಪಕರಾದ ಸಿ.ಪಿ.ಸಂಜನಾ, ಚೇತನ್, ದೈಹಿಕ ಶಿಕ್ಷಣ ನಿರ್ದೇಶಕ ಭಾಸ್ಕರ ಇದ್ದರು. ಕಲಾವಿದ ರೋಹನ್ ಅಯ್ಯರ್ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net