

ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಟ್ಕಳದಾಚೆಗಿನ ಶಿರೂರು ಟೋಲ್ ಗೇಟ್ ನಲ್ಲಿ ಬುಧವಾರ ಸಂಭವಿಸಿದ ಭೀಕರ ಆಂಬುಲೆನ್ಸ್ ಅಪಘಾತದ ವಿಡಿಯೋ ಜಿಲ್ಲೆಯ ಜನರ ಮನ ಕಲಕಿದೆ.
ಅಪಘಾತಕ್ಕೆ ಕಾರಣರಾದವರ್ಯಾರು ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆದಿದೆ. ಜತೆಗೆ ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಬೇಕು ಎಂಬ ಬೇಡಿಕೆಯೂ ಮುನ್ನೆಲೆಗೆ ಬಂದಿದೆ.
ಜಿಲ್ಲೆಯ ನೆಟ್ಟಿಗರು ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಬೇಕು ಎಂಬ ಅಭಿಯಾನ ಆರಂಭಿಸಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳ ಇಚ್ಛಾ ಶಕ್ತಿಯ ಕೊರತೆಯ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಾತ್ರವಲ್ಲ. ವಿವಿಧ ಮಿಮ್ಸ್ ಗಳನ್ನು ಮಾಡಿ ಹರಿಬಿಡುತ್ತಿದ್ದಾರೆ.