

ತೀರ್ಥಹಳ್ಳಿ: ಮಂಗಳೂರಿನಲ್ಲಿ ನಡೆದಿರುವ ಸುಹಾಸ್ ಶೆಟ್ಟಿಯ ಬರ್ಬರ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಮೂಲಕ ನಡೆಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವೈಫಲ್ಯದಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಪೊಲೀಸ್ ಇಲಾಖೆಯಂತೂ ಮಲಗಿದೆ. ಸುಹಾಸ್ ಶೆಟ್ಟಿ ಜೀವಕ್ಕೆ ಅಪಾಯ ಇರುವುದು ಗೊತ್ತಿದ್ದರೂ ಅಗತ್ಯ ಕ್ರಮ ಕೈಗೊಳ್ಳದಿರುವ ಪೊಲೀಸರ ಮೇಲೂ ಕ್ರಮ ಜರುಗಿಸಬೇಕು. ಈ ಪ್ರಕರಣದಲ್ಲಿ ಮಹಿಳೆಯರ ಪಾತ್ರವೂ ಇದೆ ಎಂದು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಕೋಮುವಾದಿ ಸಂಘಟನೆಗಳು ಪ್ರಬಲವಾಗಿವೆ. ಹಿಂದುಗಳ ಮೇಲೆ ಅವ್ಯಾಹತವಾಗಿ ದೌರ್ಜನ್ಯ ನಡೆಯುತ್ತಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಎನ್‌ಐಎಗೆ ಹಸ್ತಾಂತರವಾದ ನಂತರ ವಿದೇಶಿ ಶಕ್ತಿಗಳ ಕೈವಾಡ ಇರುವುದು ಬಯಲಿಗೆ ಬಂದಿದೆ. ಸುಹಾಸ್ ಶೆಟ್ಟಿ ಹತ್ಯೆಪ್ರಕರಣವನ್ನೂ ಎನ್‌ಐಎಗೆ ವಹಿಸುವಂತೆ ಮಾಜಿ ಗೃಹ ಸಚಿವರೂ ಆಗಿರುವ ಶಾಸಕ ಆರಗ ಜ್ಞಾನೇಂದ್ರ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.