ಸೂಕ್ತ ಚಿಕಿತ್ಸೆ ಪಡೆದರೆ ಕ್ಷಯ ಕಾಯಿಲೆ ಗುಣಪಡಿಸಬಹುದು: ಡಿಸಿ ಎಂ.ಎಸ್.ಅರ್ಚನಾ

ಸೂಕ್ತ ಚಿಕಿತ್ಸೆ ಪಡೆದರೆ ಕ್ಷಯ ಕಾಯಿಲೆ ಗುಣಪಡಿಸಬಹುದು: ಡಿಸಿ ಎಂ.ಎಸ್.ಅರ್ಚನಾ
Published on

ಹಾಸನ : ಕ್ಷಯ ರೋಗದಿಂದ ಬಳಲುತ್ತಿರುವವರಿಗೆ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಪರೀಕ್ಷೆ ದೊರೆಯಲಿದೆ. ಕ್ಷಯ ರೋಗಿಗಳು ಇಲ್ಲಿಗೆ ದಾಖಲಾಗಿ ಸೂಕ್ತ ಚಿಕಿತ್ಸೆ ಪಡೆದು ಶಿಘ್ರ ಗುಣಮುಖರಾಗಿ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ನಿಯಂತ್ರಣ ಘಟಕಗಳ ವತಿಯಿಂದ ಶುಕ್ರವಾರ ವಿಶ್ವ ಕ್ಷಯ ರೋಗ ನಿರ್ಮೂಲನಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕಾಲ್ನಡಿಗೆ ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ನಿರಂತವಾಗಿ ಒಂದು ವಾರಕ್ಕೂ ಹೆಚ್ಚು ಕೆಮ್ಮು, ಜ್ವರ, ಕಫಾದಲ್ಲಿ ರಕ್ತ ಬೀಳುವುದು, ತೂಕ ಕಡಿಮೆಯಾಗುವುದು ಮುಂತಾದ ಲಕ್ಷಣಗಳು ಕಂಡು ಬಂದರೆ ತಕ್ಷಣ ಕ್ಷಯ ರೋಗ ತಪಾಸಣೆ ಮಾಡಿಸಿ ಎಂದು ಸಲಹೆ ನೀಡಿದರು.

ಪ್ರಾರಂಭಿಕ ಹಂತದಲ್ಲೇ ಕ್ಷಯ ರೋಗವನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆದರೆ ಆರೋಗ್ಯವಂತರಾಗಿ ಜೀವಿಸಬಹುದು ಎಂದು ಅವರು ಹೇಳಿದರು.

ಇದೇ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶಿವಶಂಕರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಜಯ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ ಹಾಗೂ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net