ಸೂಕ್ತ ತನಿಖೆ ನಡೆಸಿ, ನ್ಯಾಯ ಒದಗಿಸಿ

04 YERRISWAMY 03
Published on

ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಹೈಕೋರ್ಟ್ ನಿ. ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿ ಬಳ್ಳಾರಿ ಪ್ರಜ್ಞಾವಂತ ನಾಗರಿಕರ ವೇದಿಕೆ ನಗರದ ರೈಲು ನಿಲ್ದಾಣದ ಬಳಿಯ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಗುರುವಾರ ಪ್ರತಿಭಟಿಸಿತು.
ಬಳ್ಳಾರಿ ಪ್ರಜ್ಞಾವಂತ ನಾಗರಿಕರ ವೇದಿಕೆ ಸದಸ್ಯ ಕೆ.ಎಂ. ಮಹೇಶ್ವರ ಸ್ವಾಮಿ ಮಾತನಾಡಿ, ಕೊಲೆ ಆರೋಪಿ ನಟ ದರ್ಶನ ತುಂಬಾ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಆರೋಪಿಗೆ ರಾಜಕಾರಣಿಗಳು, ಚಿತ್ರತಂಡ ಹಾಗೂ ಉದ್ಯಮಿಗಳ ಬೆಂಬಲ ಇರುವುದರಿಂದ ಪೊಲೀಸರು ನ್ಯಾಯಾಲಯಕ್ಕೆ ಅಪರಾಧಿಗಳ ವಿರುದ್ಧ ದೋಷಾರೋಪಣ ಸಲ್ಲಿಸುವ ಸಂದರ್ಭದಲ್ಲಿ ಹಸ್ತಕ್ಷೇಪ ಮಾಡುವ ಸಾಧ್ಯತೆಯಿದೆ. ಆದ್ದರಿಂದ ಕೊಲೆಯಾದ ರೇಣುಕಾ ಸ್ವಾಮಿಗೆ ನ್ಯಾಯ ಸಿಗಬೇಕಾದರೆ ಈ ಪ್ರಕರಣವನ್ನು ಹೈಕೋರ್ಟ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net