ಸೂರ್ಯಕಾಂತಿ ಖರೀದಿ ಕೇಂದ್ರ ತೆರೆಯಲು ಒತ್ತಾಯ

11-SEP-GPT-3
Published on

ಗುಂಡ್ಲುಪೇಟೆ: ಸರ್ಕಾರ ಸೂರ್ಯಕಾಂತಿ ಖರೀದಿ ಕೇಂದ್ರ ತೆರೆಯಲು ವಿಳಂಬ ಮಾಡುತ್ತಿರುವ ಬಗ್ಗೆ ಅರಿಶಿಣ ಬೆಳೆಗಾರರ ಒಕ್ಕೂಟದ ವತಿಯಿಂದ ಎಪಿಎಂಸಿ ಎದುರು ಗುರುವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಯಿತು.

ಅರಿಶಿಣ ಬೆಳೆಗಾರರ ಒಕ್ಕೂಟದ ಸಂಚಾಲಕ ಎಸ್.ಎಂ.ನಾಗಾರ್ಜುನಕುಮಾರ್ ನೇತೃತ್ವದಲ್ಲಿ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಧರಣಿ ನಡೆಸಿದರು. ಸರ್ಕಾರ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ ಘೋಷಿಸಿದ್ದರೂ ಜಿಲ್ಲಾಡಳಿತ ಪಟ್ಟಣದಲ್ಲಿ ಖರೀದಿ ಕೇಂದ್ರ ತೆರೆದಿಲ್ಲ. ಕಳೆದ ತಿಂಗಳಿನಿಂದಲೂ ತಾಲೂಕಿನಲ್ಲಿ ಸೂರ್ಯಕಾಂತಿ ಕಟಾವು ಮಾಡಲಾಗುತ್ತಿದ್ದು ಈಗಾಗಲೇ ಸೂರ್ಯಕಾಂತಿ ಬೆಳೆದಿರುವ ಬಹುತೇಕ ರೈತರು ಸರ್ಕಾರದ ವಿಳಂಬ ನೀತಿಯಿಂದ ಬೆಳೆಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ. ಕೂಡಲೇ ಖರೀದಿ ಕೇಂದ್ರ ತೆರೆದು ಬೆಳೆಗಾರರಿಂದ ಸೂರ್ಯಕಾಂತಿ ಖರೀದಿಸಬೇಕು. ಖರೀದಿ ಕೇಂದ್ರ ತೆರೆಯುವವರೆಗೂ ಅನಿರ್ದಿಷ್ಟಾವಧಿ ಧರಣಿ ಮುಂದುವರಿಸಲಾಗುವುದು ಎಂದು ಹೇಳಿದರು.

ಸಂಘಟನೆಯ ಕುಂದಕೆರೆ ಸಂಪತ್ತು, ದಡದಹಳ್ಳಿ ಕುಮಾರ್, ದೊಡ್ಡತುಪ್ಪೂರು ಶಶಿಕುಮಾರ್, ಮಂಜುನಾಥ್, ರವಿ, ಮಹೇಶ್, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net