

ಬೆಳಗಾವಿ: ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಸಾರ್ವಜನಿಕ ಶಿಕ್ಷಣ ಇಲಾಖೆ , ಪೊಲೀಸ ಆಯುಕ್ತರು ಕೆ.ಎಲ್.ಇ ಪದವಿ ಪೂರ್ವ ಮಹಾವಿದ್ಯಾಲಯ ಬೆಳಗಾವಿ, ವೈದ್ಯಕೀಯ ಮಹಾವಿದ್ಯಾಲಯ, ಕೆಎಲ್ ಇ ವೇನು ಧ್ವನಿ 90.4 ಎಫ್ ಎಮ್ ,ಜಾನಕಿ ಸೇವಾ ಸಂಘ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು , ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕಾ ಆರೋಗ್ಯ ಅಧಿಕಾರಿಗಳ ಸಹಯೋಗದಲ್ಲಿ ನಗರದ ಲಿಂಗರಾಜ ಕಾಲೇಜನಲ್ಲಿ ಸೆ.13 ರಂದು ಬೆಳಗ್ಗೆ 11 ಗಂಟೆಗೆ ಕ್ರಿಯಾತ್ಮಕ ಕೆಲಸಗಳ ಮೂಲಕ ಭರವಸೆಯನ್ನು ಮೂಡಿಸೋಣ ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶ ಪಿ ಮುರಳಿಮೋಹನ್ ರೆಡ್ಡಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಕೆಎಲ್‌ಇ ಪದವಿ ಮಹಾವಿದ್ಯಾಲಯ ಪ್ರಾಚಾರ್ಯ ಹೆಚ್ ಎಸ್ ಮೇಲಮನಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಡಿಎಚ್‌ಒ ಡಾ. ಮಹೇಶ್ ಕೋಣಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕರಾದ ಗುರುನಾಥ ಕಡಬೂರ , ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ. ಎಸ್ ಎನ್. ಸಿದ್ದರಾಮಪ್ಪ , ಬೆಳಗಾವಿ ಶಿಕ್ಷಣ ಇಲಾಖೆ ಪದವಿ ಪೂರ್ವ ಉಪನಿರ್ದೇಶಕರಾದ ಎಮ್ . ಎಮ್. ಕಾಂಬಳೆ, ಬೆಳಗಾವಿ ಬಿಮ್ಸ್ ಆಸ್ಪತ್ರೆ ನಿರ್ದೇಶಕರಾದ ಡಾ. ಅಶೋಕ್ ಕುಮಾರ ಶೆಟ್ಟಿ , ಬಿಮ್ಸ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರಾದ ಡಾ. ಸರೋಜಿನಿ ತಿಗಡಿ , ಬಿಮ್ಸ್ ಆಸ್ಪತ್ರೆ ಮುಖ್ಯಸ್ಥ ಡಾ. ಚಂದ್ರಶೇಖರ್ ಟಿ.ಆರ್ , ಕೆ ಎಲ್. ಇ ಪದವಿ ಪೂರ್ವ ಮಹಾವಿದ್ಯಾಲಯ ಪ್ರಾಚಾರ್ಯ ಗಿರಿಜಾ ಹಿರೇಮಠ, ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ. ಶಿವಾನಂದ ಮಾಸ್ತಿಹೊಳಿ, ಜಾನಕಿ ಸೇವಾ ಸಂಘದ ಸಂಸ್ಥಾಪಕ ಉಮೇಶ ಆಚಾರ್ಯ, ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಮನೋವೈದ್ಯಕೀಯ ಸಮಾಜ ಕಾರ್ಯಕರ್ತರಾದ ಸವಿತಾ ತಿಗಡಿ ಅವರು ಪ್ರತಿಜ್ಞಾನ ವಿಧಿ ಬೋಧಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.