ಸೆ.14ರಂದು ಲೋಕ ಅದಾಲತ್

CTD PRESS MEET
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.20768519, 0.517);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 32;
Published on

ಸಂಧಾನ ಮೂಲಕ ಪ್ರಕರಣ ಇತ್ಯರ್ಥಕ್ಕೆ ಕ್ರಮ ಜಿಲ್ಲಾ ನ್ಯಾಯಾಧೀಶ ರೋಣ ವಾಸುದೇವ ಮಾಹಿತಿ
ವಿಜಯವಾಣಿ ಸುದ್ದಿಜಾಲ ಚಿತ್ರದುರ್ಗ
ಜಿಲ್ಲೆಯ ಎಲ್ಲ ಕೋರ್ಟ್‌ಗಳಲ್ಲೂ ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತ್ ಏರ್ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ ವಾಸುದೇವ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಕ್ಷಿದಾರರು ಸಂಧಾನದ ಮೂಲಕ ಶುಲ್ಕ, ವೆಚ್ಚವಿಲ್ಲದೆ ಪ್ರಕರಣಗಳನ್ನು ಶೀಘ್ರವಾಗಿ ತೀರ್ಮಾನ ಮಾಡಿಕೊಳ್ಳಬಹುದು. ಕಳೆದ ಜುಲೈ 13ರಂದು ಜರುಗಿದ್ದ ಅದಾಲತ್‌ನಲ್ಲಿ ಜಿಲ್ಲೆ ಬಾಕಿ ಪ್ರಕರಣಗಳ ಪೈಕಿ 4,973 ವ್ಯಾಜ್ಯ ಹಾಗೂ 1,16,278 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದರು.
ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 10 ಜೋಡಿಗಳ ಮನವೊಲಿಸಿ ಮರಳಿ ಒಗ್ಗೂಡಿಸಲಾಗಿದೆ. ಸುಪ್ರೀಂ ಕೋರ್ಟ್ ಸ್ಥಾಪನೆಯಾದ 75 ವರ್ಷಗಳ ಅಂಗವಾಗಿ ಜುಲೈ 29ರಿಂದ ಆ.3ರ ವರೆಗೆ ವಿಶೇಷ ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ 22 ಪ್ರಕರಣಗಳ ಪೈಕಿ 3 ಪ್ರಕರಣಗಳು ಇತ್ಯರ್ಥಗೊಂಡಿವೆ. ಇದರಲ್ಲೊಂದು 40 ವರ್ಷ ನಿವೇಶನ ತಗಾದೆ ಪ್ರಕರಣವೂ ಇತ್ಯರ್ಥವಾಗಿದೆ ಎಂದು ತಿಳಿಸಿದರು.
ಚೆಕ್ ಅಮಾನ್ಯ, ಉದ್ಯೋಗ, ಕಾರ್ಮಿಕ, ವೇತನ, ವಿದ್ಯುತ್, ನೀರು ಇತರ ಸೇವಾ ಶುಲ್ಕದ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅವಕಾಶವಿದೆ. ಇದರರೊಂದಿಗೆ ವ್ಯಾಜ್ಯದಲ್ಲಿರುವ ನಾನ್ ಕಾಂಪೌಡಬಲ್ ಹಾಗೂ ಗಂಭೀರ ತರದ ಅಪರಾಧಿಕ ಪ್ರಕರಣಗಳನ್ನು ಹೊರತುಪಡಿಸಿ, ಇತರ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿದೆ. ಕಕ್ಷಿದಾರರು ನೇರ ಅಥವಾ ವಕೀಲರ ಮೂಲಕ ಅದಾಲತ್‌ನಲ್ಲಿ ಭಾಗವಹಿಸಬಹುದು. ಸಾರ್ವಜನಿಕರು ಲೋಕ ಅದಾಲತ್ ಕುರಿತ ಮಾಹಿತಿಗೆ ಛ್ಝಚ್ಚಜಿಠ್ಟಿಛ್ಠ್ಟಜ2ಃಜಞಜ್ಝಿ.್ಚಟಞ ಸದಸ್ಯ ಕಾರ‌್ಯದರ್ಶಿ ಕಚೇರಿ (9141193935/ 08194-222322) ಯನ್ನು ಸಂಪರ್ಕಿಸಬಹುದೆಂದು ಹೇಳಿದರು.
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಇದ್ದರು.

*ಅಂಗನವಾಡಿಗಳ ಕುರಿತ ವರದಿ
ಜಿಲ್ಲೆಯ ಹಲವು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅವುಗಳ ಸ್ಥಿತಿ-ಗತಿ ಅವಲೋಕಿಸಲಾಗಿದೆ. ಅನೇಕ ಅಂಗನವಾಡಿಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಈ ಬಗ್ಗೆ ಹೈಕೋರ್ಟ್‌ಗೆ ವರದಿ ಸಲ್ಲಿಸಲಾಗುವುದೆಂದು ರೋಣ ವಾಸುದೇವ ಹೇಳಿದರು.
ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಹಠಾತ್ ಭೇಟಿ ನೀಡಿ ಪರಿಶೀಲಿಸಲಾಗಿದೆ. ಬಹಳಷ್ಟು ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿವೆ. ಮಕ್ಕಳಿಗೆ ಸೂಕ್ತ ಆಟದ ಸ್ಥಳ, ಗಾಳಿ, ಬೆಳಕು, ಶೌಚಗೃಹ ಹಾಗೂ ಶುಚಿತ್ವದ ಕೊರತೆ ಇದೆ. ಜಿಲ್ಲೆಯಲ್ಲಿ 2,428 ಅಂಗನವಾಡಿ ಕೇಂದ್ರಗಳಿವೆ. ಅನುದಾನ ಕೊರತೆ ಕೂಡ ಹಲವು ಸಮಸ್ಯೆಗಳಿಗೆ ಕಾರಣವಾಗಿದೆ. ಮಕ್ಕಳು, ಗರ್ಭಿಣಿಯರಿಗೆ ವಿತರಿಸುವ ಆಹಾರದ ಗುಣಮಟ್ಟವನ್ನು ಪರೀಕ್ಷಿಸಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net