ಸೆ.17 ರಂದು ಬೆಳಗಾವಿ ತಾಲೂಕಿನಲ್ಲಿ ವಿದ್ಯುತ್ ನಿಲುಗಡೆ

HESCOM
Published on

ಬೆಳಗಾವಿ: ನಗರದ ವಿವಿಧೆಡೆ ಸೆ.17ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹೆಸ್ಕಾಂ ವತಿಯಿಂದ ಎರಡನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ದುರಸ್ತಿ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ. 110 ಕೆ.ವ್ಹಿ. ವಡಗಾಂವ ಉಪಕೇಂದ್ರದಿಂದ ಸರಬರಾಜು ಆಗುವ ಧಾಮನೆ, ಕುರುಬರಹಟ್ಟಿ, ಮಾಸ್ಗ್ಯಾನಟ್ಟಿ, ದೇವಗ್ಯಾನಟ್ಟಿ, ಔಚಾರಟ್ಟಿ, ಯರಮಾಳ, ಯಳ್ಳೂರ, ಸುಳಗಾ, ರಾಜಹಂಸಗಡ, ದೇಸೂರ, ನಂದಿಹಳ್ಳಿ, ಕೊಂಡಸಕೊಪ್ಪ, ಹಲಗಾ ಹಾಗೂ ಬಸ್ತವಾಡ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net