ಚಾಮರಾಜನಗರ: ಶ್ರೀಜ್ಞಾನದೀಪ ಟ್ರಸ್ಟ್ ವತಿಯಿಂದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸೆ.19 ಮತ್ತು 20 ರಂದು ಜಿಲ್ಲಾ ಮಟ್ಟದ ಭಾವಗೀತೆ ಹಾಗೂ ಜಾನಪದ ಗೀತೆಗಳ ಗಾಯನ ಸ್ಪರ್ಧೆ ಅಯೋಜಿಸಲಾಗಿದೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಆರ್.ಪಿ.ನಂಜುಂಡಸ್ವಾಮಿ ಹೇಳಿದರು.
ನಗರದ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸೆ.19 ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಡಿವೈಎಸ್ಪಿ ಲಕ್ಷ್ಮಯ್ಯ ಉದ್ಘಾಟಿಸುವರು. ತಿ.ನರಸೀಪುರ ನಳಂದ ಬೌದ್ಧ ವಿಹಾರದ ಬೋಧಿರತ್ನ ಬಂಜೇಜಿ ಸಾನಿಧ್ಯ ವಹಿಸಲಿದ್ದಾರೆ. ಟ್ರಸ್ಟ್‌ನ ಅಧ್ಯಕ್ಷ ಪಿ.ಜಯರಾಮ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸೆ.20 ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಕೊಳ್ಳೇಗಾಲ
ಶಾಸಕ ಎ.ಆರ್.ಕೃಷ್ಣಮೂರ್ತಿ, ಚಾ.ನಗರದ ಶ್ರೀಸಿದ್ದಮಲ್ಲೇಶ್ವರ ವಿರಕ್ತಮಠದ ಶ್ರೀಚನ್ನಬಸವಸ್ವಾಮೀಜಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಟ್ರಸ್ಟ್‌ನ ಕಾರ್ಯದರ್ಶಿ ಜಯಲಕ್ಷ್ಮಿ, ಸಂಯೋಜಕ ವೀರಭದ್ರಪ್ಪ, ಸದಸ್ಯ ಮಹದೇವಸ್ವಾಮಿ ಹಾಜರಿದ್ದರು.