ಸೆ.1ರಂದು ಬಾಲ್ಯವಿವಾಹ ತಡೆ ಉಪನ್ಯಾಸ ಕಾರ‌್ಯಕ್ರಮ

Child Marriage
Published on

ಚಿತ್ರದುರ್ಗ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾಡಳಿತ,ವಕೀಲರ ಸಂಘ,ಜಿಪಂ,ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೆಪ್ಟೆಂ ಬರ್ 1ರಂದು ಬೆಳಗ್ಗೆ 10.30ಕ್ಕೆ ಜಿಪಂ ಸಭಾಂಗಣದಲ್ಲಿ ಬಾಲ್ಯವಿವಾಹ ಮತ್ತು ಬಾಲ್ಯಗರ್ಭಾವಸ್ಥೆ ತಡೆಗಟ್ಟುವ ಬಗ್ಗೆ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ. ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಕಾರ‌್ಯಕ್ರಮ ಉದ್ಘಾಟಿಸುವರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾ ಯಾಧೀಶ ರೋಣವಾಸುದೇವ,ಎಡಿಸಿ ಬಿ.ಟಿ.ಕುಮಾರಸ್ವಾಮಿ,ಜಿಪಂ ಸಿಇಒ ಎಸ್.ಜೆ.ಸೋಮಶೇಖರ್,ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರ ಸದಸ್ಯ ಕಾರ‌್ಯದರ್ಶಿ ಎಂ.ವಿಜಯ್,ಎಸ್‌ಪಿ ರಂಜಿತ್‌ಕುಮಾರ್ ಬಂಡಾರು,ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಭಾಗವಹಿಸ ಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net