ಮದ್ದೂರು: ತೆಂಗು ಅಭಿವೃದ್ಧಿ ಮಂಡಳಿ ಪ್ರಾದೇಶಿಕ ಕಚೇರಿ ವತಿಯಿಂದ ಸೆ.2 ರಂದು ಬೆಳಗ್ಗೆ 10.30ಕ್ಕೆ ವಿಶ್ವ ತೆಂಗು ದಿನಾಚರಣೆ ಅಂಗವಾಗಿ ತೆಂಗು ಬೆಳೆ ಆಧುನಿಕ ಸಮಗ್ರ ಬೇಸಾಯ ಕ್ರಮಗಳ ಕುರಿತಂತೆ ಒಂದು ದಿನದ ಕಾರ್ಯಾಗಾರವನ್ನು ತಾಲೂಕಿನ ಕೆ.ಎಂ.ದೊಡ್ಡಿಯ ಭಾರತಿ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಾಗಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಜರಾಗಬೇಕು. ಭಾಗವಹಿಸುವ ಎಲ್ಲ ರೈತರಿಗೆ ಉಚಿತವಾಗಿ ತೆಂಗಿನ ಸಸಿ ಹಾಗೂ ನೀರಾ ವಿತರಿಸಲಾಗುವುದು ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಕೆ.ಎಂ.ರೇಖಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.