

ಚಿತ್ರದುರ್ಗ: ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘ ಸೆ.22ರಂದು ಬೆಳಗ್ಗೆ 11ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ಸನ್ಮಾನ ಹಾ ಗೂ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಿದೆ.
ಸಂಸದ ಗೋವಿಂದ ಎಂ.ಕಾರಜೋಳ,ನಿಗಮ,ಮಂಡಳಿಯ ಸಮುದಾಯದ ಅಧ್ಯಕ್ಷರು,ಉನ್ನತ ಅಧಿಕಾರಿಗಳಿಗೆ ಸನ್ಮಾನ ಹಾಗೂ ಎಸ್ಸೆಸ್ಸೆಲ್ಸಿ,ಸೆಕೆಂಡ್ ಪಿಯಸಿಯಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನ್ನಿಧ್ಯವನ್ನು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಹಿರಿಯೂರು ಆದಿ ಜಾಂಬವ ಮಠದ ಶ್ರೀ ಷಡಕ್ಷರ ದೇಶಿಕೇಂದ್ರ ಮುನಿ ಸ್ವಾಮೀಜಿ ವಹಿಸುವರು.
ಸಂಸದರು ಕಾರ‌್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪ್ರತಿಭಾ ಪುರಸ್ಕಾರ ನೆರವೇರಿಸುವರು. ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸನ್ ಅಧ್ಯಕ್ಷತೆ ವಹಿಸುವರು. ಕೇಂದ್ರ ಮಾಜಿ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಸನ್ಮಾನ ಕಾರ‌್ಯಕ್ರಮ ನಡೆಸಿಕೊಡುವರು.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್,ಡಾ.ಬಾ ಬು ಜಗಜೀವನ್‌ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್,ಲೋಕೋಪಯೋಗಿ ಇಲಾಖೆ ರಾ.ಹೆ. ವಿಭಾಗದ ಸಿಇ ಕೆ.ಜಿ.ಜಗದೀಶ್ ಇತರ ಗಣ್ಯರು ವಿಶೇಷ ಆಹ್ವಾನಿತರಾಗಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಸ್ಕೃತಿ ಚಿಂತಕ ಡಾ.ಬಿ. ಎಂ.ಗುರುನಾಥ ಉಪನ್ಯಾಸ ನೀಡುವರು.