

ಮೈಸೂರು: ರೋಟರಿ ಕ್ಲಬ್ ಆಫ್ ಮೈಸೂರು ಸೌತ್ ಈಸ್ಟ್ ವತಿಯಿಂದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಸೆ.22ರಿಂದ ಎರಡು ದಿನ ಕಾಲ ನಗರದ ಕೆಸಿ ಬಡಾವಣೆಯ ಫ್ರೆಂಡ್ಸ್ ಸ್ಪೋರ್ಟ್ಸ್ ಜೋನ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ದೇಶದ ವಿವಿಧ ರಾಜ್ಯಗಳ ರೋಟರಿ ಸದಸ್ಯರಿಗೆ ಮತ್ತು ಸಾಮಾನ್ಯರಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಯಲಿದ್ದು, ಇದಕ್ಕೆ ಅನುಗುಣವಾಗಿ ಸ್ಪರ್ಧೆಯನ್ನು 10 ವಿಭಾಗಗಳಾಗಿ ವಿಂಗಡಿಸಲಾಗಿದೆ. ಪ್ರವೇಶ ಶುಲ್ಕ 1 ಸಾವಿರ ರೂ. ನಿಗದಿ ಮಾಡಲಾಗಿದೆ.
ಟೂರ್ನಿಯ ಮೂಲಕ ಸಂಗ್ರಹಿಸಿದ ನಿಧಿಯನ್ನು ರೋಟರಿ ಕ್ಲಬ್‌ನ ಸಮುದಾಯ ಸೇವಾ ಯೋಜನೆಯಡಿ ಜನೋಪಯೋಗಿ ಕಾರ್ಯಕ್ರಮಗಳಿಗೆ ವಿನಿಯೋಗಿಸಲಾಗುವುದು ಎಂದು ಕ್ಲಬ್‌ನ ಅಧ್ಯಕ್ಷ ಎಂ.ಮೋಹನ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.