ಬಳ್ಳಾರಿ : ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ ನೇತೃತ್ವದ 19 ಜನ ಸದಸ್ಯರನ್ನೊಳಗೊಂಡ ಸಮಿತಿ ಸೆ. 27 ರಂದು ಜಿಲ್ಲೆಗೆ ಭೇಟಿ ನೀಡಲಿದೆ ಎಂದು ರಾಜ್ಯ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಎಸ್‌ಸಿ ಮತ್ತು ಎಸ್‌ಟಿ ಪಂಗಡದ ಅಭಿವೃದ್ಧಿ, ಕಲ್ಯಾಣ, ಏಳಿಗೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ಇಲ್ಲಿನ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದೆ ಎಂದು ತಿಳಿಸಿದ್ದಾರೆ.