ಸೆ.29ರಂದು ಗ್ರಾಮೀಣ ದಸರಾ

cc0d649a-d4d5-4abe-a9c0-91999777fccf
Published on

ಮೈಸೂರು: ಗ್ರಾಮೀಣ ದಸರಾ ಕಾರ್ಯಕ್ರಮವನ್ನು ಮೈಸೂರು ತಾಲೂಕಿನಲ್ಲಿ ಹಮ್ಮಿಕೊಳ್ಳಲಾಗಿದೆ.


ಸೆ.29ರಂದು ಬೆಳಗ್ಗೆ 9ಕ್ಕೆ ದಾರಿಪುರ ಗ್ರಾಮದ ದೇವಸ್ಥಾನದಿಂದ ಸುಮಾರು 2 ಕಿ.ಮೀ. ಅದ್ದೂರಿ ಮೆರವಣಿಗೆ ಸಾಗಲಿದ್ದು, ಸರ್ಕಾರದ ವಿವಿಧ ಯೋಜನೆಗಳ 25 ಸ್ತಬ್ಧಚಿತ್ರಗಳು, 10 ಸಾಂಸ್ಕೃತಿಕ ಕಲಾ ತಂಡಗಳು ಪಾಲ್ಗೊಳ್ಳಲಿದ್ದು, ಸುಮಾರು 3 ಸಾವಿರಕ್ಕೂ ಹೆಚ್ಚು ಜನರು 101 ಪೂರ್ಣಕುಂಬ ಸ್ವಾಗತ ಕೊರಲಿದ್ದಾರೆ.


ಬೆಳಗ್ಗೆ 10ಕ್ಕೆ ತಾಲೂಕಿನ ಜಯಪುರ ಗ್ರಾಮದ ಗುಜ್ಜಮ್ಮ ದೇವಸ್ಥಾನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಲಿದ್ದು, ಸಂಸದ ಪ್ರತಾಪ್ ಸಿಂಹ , ಶಾಸಕರು ಉಪಸ್ಥಿತರಿರಲಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು


ಈ ವೇಳೆ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ. ನಾರಾಯಣಸ್ವಾಮಿ ದೇವಸ್ಥಾನದ ಆವರಣದಲ್ಲಿ ನುರಿತ ವೈದ್ಯರಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ, ಪಶುಸಂಗೋಪನೆ ಇಲಾಖೆಯಿಂದ ಜಾನುವಾರಗಳಿಗೆ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಮಾರಮ್ಮನ ದೇವಸ್ಥಾನದ ಆವರಣದಲ್ಲಿ ವಿವಿಧ ಇಲಾಖೆಗಳಿಂದ ದೊರಕುವ ಸರ್ಕಾರಿ ಸವಲತ್ತುಗಳ ಮಾಹಿತಿ ಕೇಂದ್ರ ಇರಲಿದೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net