ಸೆ.2ರಿಂದ ನೆಹರು ಕ್ರೀಡಾಂಗಣದಲ್ಲಿ ವಾಲಿಬಾಲ್ ಟೂರ್ನಿ

volly ball (1)
Published on

ಶಿವಮೊಗ್ಗ: ಯುನೈಟೆಡ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಹಾಗೂ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಆಶ್ರಯದಲ್ಲಿ ಯುನೈಟೆಡ್ ಕಪ್-2023 ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕರ ವಾಲಿಬಾಲ್ ಪಂದ್ಯಾವಳಿ ಸೆ.2ಮತ್ತು 3ರಂದು ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ವಾಲಿಬಾಲ್ ಸಂಸ್ಥೆ ಜಿಲ್ಲಾಧ್ಯಕ್ಷ ಕೆ.ಎಸ್.ಶಶಿ ತಿಳಿಸಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸೆ.2ರಂದು ಸಂಜೆ 6.30ಕ್ಕೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಪಂದ್ಯಾವಳಿ ಉದ್ಘಾಟಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ, ಎಂಎಲ್‌ಸಿ ಡಿ.ಎಸ್.ಅರುಣ್, ಮೇಯರ್ ಎಸ್.ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಪಂ ಸಿಇಒ ಎಂ.ಎಲ್.ವೈಶಾಲಿ, ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ, ಡಿಡಿಪಿಯು ಬಿ.ಕೃಷ್ಣಪ್ಪ, ವಾಲಿಬಾಲ್ ಸಂಸ್ಥೆ ಕಾರ್ಯಾಧ್ಯಕ್ಷ ಕೆ.ಇ.ಕಾಂತೇಶ್, ಪಾಲಿಕೆ ಸದಸ್ಯ ರಮೇಶ್ ಹೆಗಡೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಸ್ವಾಮಿ, ಪುಟ್‌ಬಾಲ್ ಸಂಸ್ಥೆ ಜಿಲ್ಲಾಧ್ಯಕ್ಷ ಶ್ರೀನಾಥ್ ಮುಖ್ಯ ಅತಿಥಿಯಾಗಿರುವರು ಎಂದರು.
ಸೆ.3ರಂದು ರಾತ್ರಿ 7.30ಕ್ಕೆ ಸಮಾರೋಪ ಸಮಾರಂಭದಲ್ಲಿ ಮಾಜಿ ಎಂಎಲ್‌ಸಿ ಆಯನೂರು ಮಂಜುನಾಥ, ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಬಹುಮಾನ ವಿತರಿಸುವರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಷಡಕ್ಷರಿ, ಮುಖಂಡರಾದ ಎಸ್.ಕೆ.ಮರಿಯಪ್ಪ, ಎಂ.ಶ್ರೀಕಾಂತ್, ಡಾ. ಧನಂಜಯ ಸರ್ಜಿ, ಭಾಸ್ಕರ್ ಕಾಮತ್, ಎಸ್.ಪಿ.ದಿನೇಶ್ ಮತ್ತಿತರರು ಉಪಸ್ಥಿತರಿರುವರು ಎಂದು ಹೇಳಿದರು.
ಉಪಾಧ್ಯಕ್ಷ ಜಿ.ಎನ್.ಮೇಘರಾಜ್ ಮಾತನಾಡಿ, ಕ್ಲಬ್‌ನ ವಾಲಿಬಾಲ್ ಪಟು ಸರ್ದಾರ್ ಜಾಫರ್ ಸ್ಮರಣಾರ್ಥ ಟ್ರೋಫಿ ವಿತರಿಸಲಾಗುವುದು. ಪ್ರಥಮ ಬಹುಮಾನ 7,777 ರೂ., ದ್ವಿತೀಯ ಬಹುಮಾನ 5,555 ರೂ. ಮತ್ತು ತೃತೀಯ ಬಹುಮಾನ 3,333 ರೂ., ನಾಲ್ಕನೇ ಬಹುಮಾನ 2,222 ರೂ. ಹಾಗೂ ವೈಯಕ್ತಿಕ ಬಹುಮಾನ ವಿತರಿಸಲಾಗುವುದು ಎಂದರು. ಪದಾಧಿಕಾರಿಗಳಾದ ಡಾ. ಎಸ್.ಎಚ್.ಪ್ರಸನ್ನ, ಎಸ್.ವಿಜಯಕುಮಾರ್, ಡಾ. ಎಸ್.ನಾಗರಾಜ್, ಎ.ಅಭಿಜಿತ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net