

ವಿಜಯಪುರ: ಸಿದ್ಧಸಿರಿ ಸೌಹಾರ್ದ ಸಹಕಾರಿಯು ರಾಜ್ಯಾದ್ಯಂತ 153 ಶಾಖೆಗಳನ್ನು ಹೊಂದಿದ್ದು, 1500 ಯುವಕ- ಯುವತಿಯರಿಗೆ ಉದ್ಯೋಗ ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ಶಾಸಕ- ಸಿದ್ಧಸಿರಿ ಸೌಹಾರ್ದ ಸಹಕಾರಿ ಅಧ್ಯಕ್ಷ ಬಸನಗೌಡ ಪಾಟೀಲ (ಯತ್ನಾಳ) ಹೇಳಿದರು.
ನಗರದ ಸಿದ್ಧಸಿರಿ ಸಭಾಭವನದಲ್ಲಿ ನಡೆದ ಸಿದ್ಧಸಿರಿ ಸೌಹಾರ್ದ ಸಹಕಾರಿಯ ಆಡಳಿತ ಮಂಡಳಿ ಸಭೆಯಲ್ಲಿ ಅವರು ಮಾತನಾಡಿದರು.
18 ವರ್ಷಗಳಲ್ಲಿ 2605 ಕೋಟಿ ರೂ. ಠೇವಣಿ ಸಂಗ್ರಹಿಸಲಾಗಿದೆ. 34 ಕೋಟಿ ರೂ. ಷೇರು ಬಂಡವಾಳ ಹೊಂದಿದೆ. 2023ರಲ್ಲಿ 11,11,11,111 ರೂ. (ಹನ್ನೊಂದು ಕೋಟಿ ಹನ್ನೊಂದು ಲಕ್ಷ ಹನ್ನೊಂದು ಸಾವಿರದಾ ಒಂದು ನೂರಾ ಹನ್ನೊಂದು) ನಿವ್ವಳ ಲಾಭ ಗಳಿಸಿದೆ. ಸೆ.3 ರಂದು ಮಧ್ಯಾಹ್ನ 12 ಗಂಟೆಗೆ ವಿಜಯಪುರ ನಗರದ ಕಿತ್ತೂರು ರಾಣಿ ಚನ್ನಮ್ಮ ಮಂಗಲ ಕಾರ್ಯಾಲಯದಲ್ಲಿ 17ನೇ ವಾರ್ಷಿಕ ಸಾಮಾನ್ಯ ಸಭೆ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಆಡಳಿತ ಮಂಡಳಿಯ ಸಭೆಯಲ್ಲಿ ಈ ಬಾರಿ ಸಿದ್ಧಸಿರಿಯ ಷೇರುದಾರರಿಗೆ ಶೇ.25 ಡಿವಿಡೆಂಟ್ ನೀಡಲು ತೀರ್ಮಾನಿಸಲಾಗಿದ್ದು, ವಾರ್ಷಿಕ ಸರ್ವ ಸಾಮಾನ್ಯ ಸಭೆಯೆಂದು ಘೋಷಿಸಲು ನಿರ್ಧರಿಸಲಾಯಿತು.
ಆಡಳಿತ ಮಂಡಳಿ ಸಭೆಯಲ್ಲಿ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ರಾಮನಗೌಡ ಪಾಟೀಲ (ಯತ್ನಾಳ), ಸಿದ್ಧಸಿರಿಯ ಉಪಾಧ್ಯಕ್ಷ ಬಸಯ್ಯ ಹಿರೇಮಠ, ನಿರ್ದೇಶಕರಾದ ಸಂಗು ಸಜ್ಜನ, ಶಿವಾನಂದ ಅಣೆಪ್ಪನವರ, ಸಾಯಿಬಾಬಾ ಸಿಂದಗೇರಿ, ಪ್ರಭುಗೌಡ ದೇಸಾಯಿ, ಜಗದೀಶ ಕ್ಷತ್ರಿ, ಬಸನಗೌಡ ಪಾಟೀಲ (ನಾಗರಾಳ ಹುಲಿ), ಸೋಮಶೇಖರ ಬಂಡಿ, ಗಣಪತಿ ಜಾಧವ, ಅಶೋಕ ತೊರವಿ, ಶೈಲಜಾ ಪಾಟೀಲ, ಸೀಮಾ ಕೋರೆ, ಲೆಕ್ಕ ಪರಿಶೋಧಕ ಶಿವಾನಂದ ಭೂಸಾರಿ, ವ್ಯವಸ್ಥಾಪಕ ನಿರ್ದೇಶಕಿ ಜೋತಿಬಾ ಖಂಡಾಗಳೆ, ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಘವ ಅಣ್ಣಿಗೇರಿ, ಜನರಲ್ ಮ್ಯಾನೇಜರ್ ಉಮಾದೇವಿ ಹಿರೇಮಠ, ರಾಜಶೇಖರ ಪಾಟೀಲ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.