ಸೆ.5 ರಂದು ಶಿಕ್ಷಕರ ದಿನಾಚರಣೆ: ಅಗತ್ಯ ಸಿದ್ಧತೆಗೆ ಸೂಚನೆ

ಸೆ.5 ರಂದು ಶಿಕ್ಷಕರ ದಿನಾಚರಣೆ: ಅಗತ್ಯ ಸಿದ್ಧತೆಗೆ ಸೂಚನೆ
Published on

ಹಾಸನ : ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಅಂಗವಾಗಿ ಸೆ.5 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಶಿಕ್ಷಕರ ದಿನಾಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಗರದ ಹಾಸನಾಂಬ ಕಲಾ ಭವನದಲ್ಲಿ ಸೆ.5ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಸಲು ಕ್ರಮವಹಿಸುವಂತೆ ತಿಳಿಸಿದರು.
ಜಿಲ್ಲಾ ಅತ್ಯುತ್ತಮ ಶಿಕ್ಷಕರು ಮತ್ತು ನಿವೃತ್ತ ಶಿಕ್ಷಕರು ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದಿರುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ತಲಾ ಮೂರು ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪಾಂಡು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಡಯಟ್ ಪ್ರಾಂಶುಪಾಲ ರಂಗಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಹಾಲಿಂಗಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಣ್ಣೇಗೌಡ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net