ಸೆ. 5ರಂದು ಜಿ.ಓ. ಮಹಾಂತಪ್ಪ’ನವರಿಗೆ ನುಡಿನಮನ ಕಾರ್ಯಕ್ರಮ

ಸೆ. 5ರಂದು ಜಿ.ಓ. ಮಹಾಂತಪ್ಪ’ನವರಿಗೆ ನುಡಿನಮನ ಕಾರ್ಯಕ್ರಮ
Published on

ಹಾಸನ: ಸಮಾಜ ಸೇವಕ ಹಾಗೂ ವಾಲ್ಮೀಕಿ ಸಮುದಾಯದ ಮುಖಂಡ ಜಿ.ಓ. ಮಹಾಂತಪ್ಪ ಅವರು ಇತ್ತೀಚಿಗೆ ಹೃದಯಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಅವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ನಗರದ ಅಂಬೇಡ್ಕರ್ ಭವನದಲ್ಲಿ ಸೆ.5 ರಂದು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ದಲಿತ ಮುಖಂಡ ಎಚ್.ಕೆ. ಸಂದೇಶ ತಿಳಿಸಿದರು
ಮಹಾಂತಪ್ಪ ಅವರು ಹಲವು ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು, ಎಲ್ಲಾ ಹೋರಾಟದಲ್ಲಿ ಕೂಡ ಮುಂಚೂಣಿಯಲ್ಲಿದ್ದು, ಹಲವು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇಂತಹ ಹೃದಯ ವ್ಯಕ್ತಿಯನ್ನು ಕಳೆದುಕೊಂಡು ಜಿಲ್ಲೆಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನ ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಮಿಸಲಿದ್ದಾರೆ ಅಲ್ಲದೆ, ಹಲವು ಸಂಘ ಸಂಸ್ಥೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ.ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ದಲಿತ ಮುಖಂಡರಾದ ಎಂ.ಸೋಮಶೇಖರ್, ಟಿ.ಆರ್.ವಿಜಯಕುಮಾರ್,ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಪೃಥ್ವಿ, ವಾಲ್ಮೀಕಿ ಸಮಾಜದ ಮುಖಂಡ ಮಧು ನಾಯಕ್ ಹಾಜರಿದ್ದರು.

ನಾಳೆ ಪ್ರತಿಭಟನೆ ಧರ್ಮೇಶ್:
ಗೌರಿ ಗಣೇಶ ಹಬ್ಬ ನಾಡಿನ ಹಬ್ಬವಾಗಿದ್ದು, ಎಲ್ಲರೂ ಸಡಗರ ಸಂಭ್ರಮದಿಂದ ಆಚರಿಸಲಾಗುವುದು ಆದರೆ ಈ ಹಬ್ಬದ ಹಿನ್ನೆಲೆಯಲ್ಲಿ ಕೆಲ ಕೋಮುವಾದಿಗಳು ಸಮಾಜದ ಸಾಮರಸ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ನಗರದಾದ್ಯಂತ ಫ್ಲೆಕ್‌ನ್ನು ಅಳವಡಿಸಿದ್ದು, ಅದನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸೆ.04 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಿಪಿಐ(ಎಂ) ನ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್ ಹೇಳಿದರು.
ಹಿದೂ ಸಾಮ್ರಾಜ್ಯ, ಘರ್ಜಿಸಿ ಹೇಳು ನಾನೊಬ್ಬ ಹಿಂದೂ ಎನ್ನುವಂತಹ ಘೋಷವಾಕ್ಯ ವಿರುವ ಫ್ಲೆಕ್ಸ್‌ಗಳು ನಗರದಲ್ಲಿ ಅಳವಡಿಸುವ ಮೂಲಕ ಧರ್ಮವನ್ನು ಗುರಿಯಾಗಿಸಿಕೊಂಡು ಸಮಾಜಘಾತುಕ ಕೋಮು ಪ್ರಚೋದನೆಕಾರಿ ಫ್ಲೆಕ್ಸ್‌ಗಳನ್ನು ಅಳವಡಿಸಿದ್ದಾರೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ನಗರದ ಕಲಾಭವನದಲ್ಲಿ ಕೋಮುವಾದ ಶಕ್ತಿಗಳು ಪಂಚಜನ್ಯ ಹಿಂದೂ ಗಣಪತಿ ಪ್ರತಿಷ್ಠಾಪನೆ ಮಾಡಲು ಯಾವುದೇ ಕಾರಣಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net