ಚಾಮರಾಜನಗರ: ಬೆಂಗಳೂರಿನ ಒನ್ ವೀಲ್ಹರ್ ಪ್ರಕಾಶನ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಸಾಹಿತಿ ಮಧುಕರ ಮಳವಳ್ಳಿ ಅವರ ಮೊದಲ ಜೋಡು ಕಥಾ ಸಂಕಲನ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಗರದ ರೋಟರಿ ಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಖ್ಯಾತ ಚಿಂತಕ ಬಂಜಗೆರೆ ಜಯಪ್ರಕಾಶ್ ಅವರು ಪುಸ್ತಕ ಲೋಕಾರ್ಪಣೆಗೊಳಿಸುವರು. ಹಿರಿಯ ಸಾಹಿತಿ ಕೆ.ವೆಂಕಟರಾಜು ಅಧ್ಯಕ್ಷತೆ ವಹಿಸುವರು. ಸಾಹಿತಿ ಮಂಜು ಕೋಡಿಉಗನೆ, ರೋಟರಿ ಸಂಸ್ಥೆ ಅಧ್ಯಕ್ಷ ಬಿ.ಚಂದ್ರಶೇಖರ್, ಪ್ರಕಾಶಕ ವಿ.ಎಂ.ಮಂಜುನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಾನಪದ ಯುವ ಗಾಯಕ ಕೃಷ್ಣಮೂರ್ತಿ ಚಂಗಚಹಳ್ಳಿ ಅವರು ಗೀತಗಾಯನ ನಡೆಸಿಕೊಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.