ಸೆ.೨೧ ರಂದು ತಿಂಗಳ ಸೊಬಗು

Published on

ಬಳ್ಳಾರಿ : ನಗರದ ಸಾಂಸ್ಕೃತಿಕ ಸಮುಚ್ಚಯ ಆವರಣದ ನಾಡೋಜ ಸು‘ದ್ರಮ್ಮ ಬಯಲು ರಂಗಮಂದಿರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಸಾಂಸ್ಕೃತಿಕ ಸಮುಚ್ಚಯ ನಿರ್ವಹಣಾ ಸಮಿತಿಯಿಂದ ಸೆ.೨೧ ರಂದು ಸಂಜೆ ೬.೩೦ ಗಂಟೆಗೆ ತಿಂಗಳ ಸೊಬಗು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಸರಕಾರಿ ಬಾಲಕಿಯರ ಬಾಲ ಮಂದಿರದಿಂದ ಜಾನಪದ ನೃತ್ಯ ಇರಲಿದೆ. ಬಳ್ಳಾರಿ ತಾಲೂಕಿನ ಇಬ್ರಾಹಿಂಪುರ ಗ್ರಾಮದ ಎಸ್.ಎಚ್.ಹುಲುಗಪ್ಪ ಮತ್ತು ಸಂಗಡಿಗರು ಜಾನಪದ ಗೀತೆಗಳನ್ನು ಪ್ರಸ್ತುತ ಪಡಿಸುವರು. ಬಳ್ಳಾರಿಯ ಶ್ರೀಲಕ್ಷ್ಮಿ ಕಲಾ ಟ್ರಸ್ಟ್‌ನಿಂದ ಕೂಚುಪುಡಿ ಮತ್ತು ‘ರತನಾಟ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾದರಪಡಲಿವೆ. ಕಲಾ ಪ್ರೇಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ‘ಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net