ಸೆ.೨೩ ರಂದು ನೌಕರರ ಮಕ್ಕಳಿಗೆ ಪ್ರತಿಭಾರ ಪುರಸ್ಕಾರ

bkt-20-5
ಬಾಗಲಕೋಟೆ ನಗರದ ಪ್ರೇಸ್‌ಕ್ಲಬ್‌ನಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Published on

ಬಾಗಲಕೋಟೆ: ರಾಜ್ಯ ಸರ್ಕಾರಿ ನೌಕರರ ಮತ್ತು ರಾಜ್ಯ, ಕೇಂದ್ರ ಸರ್ಕಾರಿ ನೌಕರರ ಮತ್ತು ಖಾಸಗಿ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘದ ವಾಷಿಕ ಸಭೆ, ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲೆಯ ನೂತನ ಸಚಿವರು, ಶಾಸಕರಿಗೆ ಅಭಿನಂದನಾ ಸಮಾರಂಭ ಸೆ.೨೩ ರಂದು ಬೆಳಗ್ಗೆ ೧೦.೩೦ ಗಂಟೆಗೆ ನವನಗರದ ಕಲಾಭವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.

ನಗರದ ಪ್ರೇಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಉದ್ಘಾಟಿಸಲಿದ್ದಾರೆ. ಶಾಸಕ ಎಚ್.ವೈ.ಮೇಟಿ ಪ್ರತಿಭಾ ಪುರಸ್ಕಾರವನ್ನು ನಡೆಸಿಕೊಡಲಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಭಾಗವಹಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಸಂಸದ ಪಿ.ಸಿ.ಗದ್ದಿಗೌಡರ, ವಿ.ಪ ಸದಸ್ಯರಾದ ಪ್ರಕಾಶ ಹುಕ್ಕೇರಿ, ಹಣಮಂತ ನಿರಾಣಿ, ಪಿ.ಎಚ್.ಪೂಜಾರ, ಸುನೀಲಗೌಡ ಪಾಟೀಲ, ಶಾಸಕರಾದ ಜೆ.ಟಿ. ಪಾಟೀಲ, ವಿಜಯಾನಂದ ಕಾಶಪ್ಪನವರ, ಭೀಮಸೇನ ಚಿಮ್ಮನಕಟ್ಟಿ ಮತ್ತು ಅತಿಥಿಗಳಾಗಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಶ್ರೀನಿವಾಸ, ಗೌರವಾಧ್ಯಕ್ಷ ಬಿ.ಎಚ್. ವೆಂಕಟೇಶಯ್ಯಾ, ಉಪಾಧ್ಯಕ್ಷ ಎಂ.ವಿ.ರುದ್ರಪ್ಪ, ಎಸ್.ಬಸವರಾಜು, ಕಾರ್ಯದರ್ಶಿ ಡಾ. ಸದಾನಂದ ನೆಲ್ಕುದ್ರಿ ಆಗಮಿಸಲಿದ್ದಾರೆ. ಜಿಲ್ಲೆಯ ನೌಕರರ ಪ್ರತಿಭಾವಂತ ೩೯೯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ ಎಂದು ಎಂ.ಬಿ.ಬಳ್ಳಾರಿ ಅವರು ತಿಳಿಸಿದರು.

ರಾಜ್ಯ ಕಾರ್ಯದರ್ಶಿ ಸಂಜೀವರೆಡ್ಡಿ ಸತ್ಯರೆಡ್ಡಿ, ವಿ.ಎಲ್.ವಾಲಿಕಾರ, ಗೋಪಾಲ ನೀಲನಾಯಕ, ಅನಿತ ನಾಯಕ, ವಿಠ್ಠಲ ವಾಲಿಕರ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net