ಸೆ.೨೬ ರಂದು ನೋಂದಣಿ ಅಭಿಯಾನಕ್ಕೆ ಚಾಲನೆ

bkt-24-3
ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಹಣಮಂತ ಮಾವಿನಮರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಖಂಡರಾದ ಸಲೀಂ ಮೋಮಿನ್, ಕೃಷ್ಣಾ ಪಾಟೀಲ, ಭದ್ರಪ್ಪ ಚಳಗೇರಿ ಹಾಗೂ ಗೋಪಾಲ ಲಮಾಣಿ ಇದ್ದರು.
Published on

ಬಾಗಲಕೋಟೆ: ಜೆಡಿಎಸ್ ಪಕ್ಷದ ನೋಂದಣಿ ಅಭಿಯಾನಕ್ಕೆ ಸೆ.೨೬ ರಂದು ಚಾಲನೆ ನೀಡಲಾಗುವುದು, ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗಮಿಸಿ ಚಾಲನೆ ನೀಡಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹಣಮಂತ ಮಾವಿನಮರದ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ ೧.೩೦ಕ್ಕೆ ನವನಗರದ ಕಲಾಭವನದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ ಹಾಗೂ ಸುರೇಶ ಬಾಬು ಮತ್ತು ವಿಪ ಸದಸ್ಯ ಶರವಣನ್ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು ೧,೭೧೯ ಬೂತ್‌ಗಳಿದ್ದು, ಪ್ರತಿ ಬೂತ್‌ನಲ್ಲಿ ೧೫ ರಿಂದ ೨೦ ಸದಸ್ಯತ್ವ ಮಾಡುವ ಗುರಿಯನ್ನು ಹೊಂದಲಾಗಿದೆ. ನಮ್ಮ ಗುರಿಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಲಿದ್ದೇವೆ ಎಂದು ತಿಳಿಸಿದರು.

ನಗರದಲ್ಲಿರುವ ಜೆಡಿಎಸ್ ಕಚೇರಿಯ ಜಾಗ ರಸ್ತೆ ಅಗಲಿಕರಣ ಸಂದರ್ಭದಲ್ಲಿ ಅಂದಾಜು ೨೦ ಅಡಿ ಜಾಗೆ ಭೂ ಸ್ವಾಧೀನವಾಗಿದೆ. ಇದಕ್ಕೆ ಸಂಬಂಽಸಿದಂತೆ ಪರಿಹಾರ ಬಂದಿದ್ದು, ಕೆಲವೊಂದು ಸಮಸ್ಯೆಯಿಂದ ಪ್ರಕರಣ ಕೋರ್ಟ್ನಲ್ಲಿದೆ. ಮುಂದಿನ ದಿನಗಳಲ್ಲಿ ಬೇರೆಡೆ ಕಚೇರಿ ಸ್ಥಾಪಿಸಲಾಗುವುದು ಎಂದು ಹೇಳಿದರು.

ಮುಖಂಡರಾದ ಸಲೀಂ ಮೋಮಿನ್, ಕೃಷ್ಣಾ ಪಾಟೀಲ, ಭದ್ರಪ್ಪ ಚಳಗೇರಿ ಹಾಗೂ ಗೋಪಾಲ ಲಮಾಣಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net