ಸೇಂಟ್ ಆನ್ಸ್ ಕಾಲೇಜಿನಲ್ಲಿ ವೆಬಿನಾರ್

Vpt-03-03
Published on

ಕೊಡಗು: ಇಲ್ಲಿ ಸೇಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಉದ್ಯೋಗ ಘಟಕ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಲಿಂಕ್ಡ್ ಇನ್ ಪ್ರೊಫೈಲ್ ಕುರಿತು ಅಂತಾರಾಷ್ಟ್ರೀಯ ಮಟ್ಟದ ವೆಬಿನಾರ್ ಆಯೋಜಿಸಲಾಗಿತ್ತು.

ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಗೂ ಉತ್ತರ ಅಮೆರಿಕದಲ್ಲಿ ವ್ಯವಹಾರ ಹಾಗೂ ವ್ಯಾಪಾರ ತಜ್ಞರಾಗಿರುವ ಎನ್.ಜೆ.ಅನುಷ್ ಜೋಯ್ ವಿದ್ಯಾರ್ಥಿಗಳಿಗೆ ಲಿಂಕ್ಡ್ ಇನ್ ಮಹತ್ವದ ಕುರಿತು ಮಾಹಿತಿ ನೀಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಗಿಟ್ಟಿಸಲು ಲಿಂಕ್ಡ್ ಇನ್ ಪ್ರೊಫೈಲ್‌ನ ಅಗತ್ಯವಿದೆ. ಆ ಪ್ರೊಫೈಲ್ ಜಾಗತಿಕ ಮಟ್ಟದಲ್ಲಿ ಸಂಪರ್ಕ ಸಾಧಿಸಲು ಅಗತ್ಯ. ಅಲ್ಲದೇ, ಯಾವುದೇ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಅತ್ಯಗತ್ಯ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿದರು. ಉಪನ್ಯಾಸಕಿ ಶಾಜೀರಾ, ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿಗಳಾದ ಜೋಯ್ಸನ್ ಲೋಬೋ, ಉದ್ಯೋಗ ಘಟಕದ ಅಧಿಕಾರಿ ಶಿಲ್ಪಾ ಇತರರಿದ್ದರು. ಅಂತಿಮ ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net