ಸೇತುವೆ ಕಾಮಗಾರಿ ಕಳಪೆರೈತ ಸಂಘ ಆರೋಪ

14kglphoto-2..
Published on

ಕೊಳ್ಳೇಗಾಲ : ತಾಲೂಕಿನ ಹಿತ್ತಲದೊಡ್ಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗೆ ತಾಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಪೆರಿಯನಾಯಗಂ ದೂರು ನೀಡಿದ್ದಾರೆ.
ಸೇತುವೆ ಕಾಮಗಾರಿ ಕಳಪೆ ಆಗಿರುವ ಬಗ್ಗೆ ಈಗಾಗಲೇ ಮೂರು ಭಾರಿ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸುರೇಂದ್ರ ಅವರಿಗೆ ಮೌಖಿಕವಾಗಿ ದೂರು ನೀಡಿದ್ದೇವೆ. ಆದರೂ ಯಾರೊಬ್ಬ ಅಧಿಕಾರಿಯೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿಲ್ಲ. ಹೀಗಾಗಿ ತುರ್ತಾಗಿ ಸ್ಥಳಕ್ಕೆ ಭೇಟಿ ನೀಡಿ ಕಳಪೆ ಕಾಮಗಾರಿ ಪರಿಶೀಲಿಸಬೇಕು ಎಂದು ಲಿಖಿತ ದೂರು ಸಲ್ಲಿಸಿದ್ದಾರೆ.
1.40 ಕೋಟಿ ಸೇತುವೆ: ಹಿತ್ತಲದೊಡ್ಡಿ ಗ್ರಾಮಕ್ಕೆ ಜನರು ಹೆಬ್ಬಳವನ್ನು ದಾಟಿ ಹೋಗಬೇಕಿತ್ತು. ಹಳ್ಳದಲ್ಲಿ ನೀರು ಬಂದಾಗ ಸಂಚಾರಕ್ಕೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಸೇತುವೆ ನಿರ್ಮಾಣ ಮಾಡಿಕೊಡಬೇಕೆಂದು ಹಲವು ವರ್ಷಗಳಿಂದ ಜನರು ಮನವಿ ಮಾಡುತ್ತಿದ್ದರು. ಈ ಸಂಬಂಧ ಐದು ತಿಂಗಳ ಹಿಂದಷ್ಟೇ ಹಿಂದಿನ ಶಾಸಕರು 1.40 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದರು. ಆದರೀಗ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net