ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

Published on

ಚಾಮರಾಜನಗರ: ತಾಲೂಕಿನ ಹರದನಹಳ್ಳಿ, ತಾವರಕಟ್ಟೆಮೋಳೆಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣಕ್ಕೆ ಎಂಎಸ್‌ಐಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಗುರುವಾರ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಹರದನಹಳ್ಳಿ, ತಾವರಕಟ್ಟೆಮೋಳೆ ಸಂಪರ್ಕಿಸುವ ಹಳೇ ಸೇತುವೆ ಕೆಳಮಟ್ಟದಲ್ಲಿದ್ದು, ಮಳೆ ಬಂದರೆ ಸೇತುವೆಯಲ್ಲಿ ನೀರು ನಿಲ್ಲುತ್ತಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು, ವಾಹನ ಸವಾರರಿಗೆ ಸಂಚರಿಸಲು ಸಮಸ್ಯೆಯಾಗಿತ್ತು. ಈ ಸಂಬಂಧ ಗ್ರಾಮಸ್ಥರು ಹೊಸದಾಗಿ ಸೇತುವೆ ನಿರ್ಮಿಸಿಕೊಡುವಂತೆ ತಮಗೆ ಮನವಿ ಮಾಡಿದ್ದರು, ಗ್ರಾಮಸ್ಥರ ಬೇಡಿಕೆಯಂತೆ ಸಣ್ಣ ನೀರಾವರಿ ಇಲಾಖೆ ವತಿಯಿಂದ 75 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಿಸಲು ಭೂಮಿಪೂಜೆ ನೆರವೇರಿಸಲಾಗಿದೆ ಎಂದರು.

ಹರದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜು, ಸದಸ್ಯ ಮಹೇಶ್, ಡೇರಿ ಅಧ್ಯಕ್ಷ ಬಸವರಾಜು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್.ಎಂ. ಮಹದೇವಶೆಟ್ಟಿ, ಸಣ್ಣ ನೀರಾವರಿ ಇಲಾಖೆ ಚಾಮರಾಜನಗರ ವಿಭಾಗದ ಇಇ ಮಂಜುಳಾ, ಎಇಇ ಅಭಿಲಾಷ್, ಗುತ್ತಿಗೆದಾರ ಹನುಮಂತು, ಶಶಿ ಶೆಟ್ಟಿ, ವರ್ಕ್ ಇನ್ಸ್‌ಪೆಕ್ಟರ್ ಬಸವಣ್ಣ, ಪಿಡಿಒ ಶ್ರೀಕಂಠನಾಯ್ಕ, ಗ್ರಾಮಸ್ಥರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net