ಸೇತುವೆ ಮೇಲೆ ತಗ್ಗಿದ ನೀರು

21 KAMPLI 03
Published on

ಕಂಪ್ಲಿ: ತುಂಗಭದ್ರಾ ನದಿಗೆ ಹರಿದು ಬರುವ ನೀರಿನ ಪ್ರಮಾಣ ಕಡಿಮೆಯಾಗಿದೆ. ಪಟ್ಟಣದಿಂದ ಗಂಗಾವತಿಗೆ ಸಂಪರ್ಕ ಕಲ್ಪಿಸುವ ಸೇತುವೆಗೆ ಹೊಂದಿಕೊಂಡಂತೆ ನೀರು ಹರಿಯುತ್ತಿದೆ.

ಸೇತುವೆ ಮೇಲೆ ನೀರು ಹರಿಯುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸಂಚಾರ ನಿರ್ಬಂಧಿಸಲಾಗಿದೆ. ಸೇತುವೆ ಮೇಲೆ ಹಾಗೂ ರಕ್ಷಣಾ ಕಂಬಿಗಳಿಗೆ ಸಿಲುಕಿರುವ ಸಸ್ಯಗಳನ್ನು ತೆರವುಗೊಳಿಸಬೇಕಿದೆ. ಸೇತುವೆ ಮೇಲೆ ನೀರು ಹರಿಯುತ್ತಿಲ್ಲ. ಇದರಿಂದಾಗಿ ನಡೆದುಕೊಂಡು ದಾಟಲು ಅನುಮತಿ ನೀಡುವಂತೆ ಪಾದಚಾರಿಗಳು ಪೊಲೀಸರನ್ನು ಗೋಗರೆಯುವ ದೃಶ್ಯ ಸಾಮಾನ್ಯವಾಗಿತ್ತು. ಸುತ್ತು ಬಳಸಿ ಸಂಚರಿಸಬೇಕಿರುವುದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗಿದೆ.

ತಹಸೀಲ್ದಾರ್ ಜೂಗಲ ಮಂಜುನಾಯಕ ಮಾತನಾಡಿ, ನದಿಯಲ್ಲಿ 96 ಸಾವಿರ ಕ್ಯೂಸೆಕ್ ನೀರು ಹರಿಯುತ್ತಿದೆ. ಮುಂಜಾಗ್ರತಾ ಕ್ರಮಗಳು ಮುಂದುವರೆದಿವೆ. ನದಿಯಲ್ಲಿ ನೀರಿನ ಹರಿವು ಹೆಚ್ಚು ಕಡಿಮೆ ಆಗುವ ಸಾಧ್ಯತೆಗಳಿದ್ದು, ಜಲಾಶಯ ಅಧಿಕಾರಿಗಳ ಸೂಚನೆ ಅನುಸರಿಸಲಾಗುತ್ತಿದೆ ಎಂದು ತಿಳಿಸಿದರು.

ನದಿಗೆ ಇನ್ನಷ್ಟು ನೀರು ಹರಿದು ಬರುವ ಸಾಧ್ಯತೆಯಿದೆ. ನದಿ ಪಾತ್ರದ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಲು, ಅಗತ್ಯ ಬಿದ್ದರೆ ಕಾಳಜಿ ಕೇಂದ್ರ ತೆರೆಯಲು ಕ್ರಮ ಕೈಗೊಂಡಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net