ಗುಂಡ್ಲುಪೇಟೆ: ತಾಲೂಕಿನ ಬೇಗೂರು ಸಮೀಪ ಬೈಕ್ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಕೇರಳ ಮೂಲದ ಅಬ್ದುಲ್ ಸಲೀಂ ಪಾಶಾ(30) ಮೃತರು. ಮೈಸೂರಿನಿಂದ ಪಟ್ಟಣಕ್ಕೆ ಬೈಕಿನಲ್ಲಿ ಬರುತ್ತಿದ್ದಾಗ ಬೇಗೂರು ಸಮೀಪ ಸೇತುವೆ ಕೆಳಗೆ ಬಿದ್ದಿದ್ದಾನೆ. ಹೆಲ್ಮೆಟ್ ಧರಿಸಿದ್ದರೂ ಬೈಕ್ ಕೆಳಗೆ ಸಿಲುಕಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿದ ಬೇಗೂರು ಪೊಲೀಸರು ಬೈಕ್ ಹಾಗೂ ಮೃತದೇಹವನ್ನು ಹೊರಕ್ಕೆ ತೆಗೆದು ಆಸ್ಪತ್ರೆಗೆ ಕೊಂಡೊಯ್ದರು.