ಸೇವಾ ಭದ್ರತೆ ಜತೆ ಹುದ್ದೆ ಕಾಯಂಗೊಳಿಸಿ

6 smg 2
Published on

ಶಿವಮೊಗ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಶಾಖೆ ಆಶ್ರಯದಲ್ಲಿ ನೌಕರರು ಮಂಗಳವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸೇವಾ ಭದ್ರತೆ ನೀಡಬೇಕು. ಎಲ್ಲ ಹುದ್ದೆಗಳನ್ನು ಕಾಯಂಗೊಳಿಸಬೇಕು. ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರದ ಬಜೆಟ್ ಹೆಚ್ಚಿಸಬೇಕು. ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿಗೆ ಆದ್ಯತೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಹೊರಗುತ್ತಿಗೆಯಲ್ಲಿರುವ ಎಲ್ಲ ನೌಕರರಿಗೂ ನೇರವಾಗಿ ಇಲಾಖೆಯಿಂದಲೇ ವೇತನ ಪಾವತಿಸಬೇಕು. ಒಳಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವವರಿಗೆ ಸಿಗುವ ಸೌಲಭ್ಯಗಳನ್ನು ಹೊರಗುತ್ತಿಗೆ ನೌಕರರಿಗೂ ವಿಸ್ತರಿಸಬೇಕು. ಪರಸ್ಪರ ವರ್ಗಾವಣೆ ಹಾಗೂ ಖಾಲಿ ಇರುವ ಜಾಗದಲ್ಲಿ ಸಾಮಾನ್ಯ ವರ್ಗಾವಣೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ್ಷೆ ಡಾ. ಹೇಮಲತಾ, ಪ್ರಮುಖರಾದ ಡಾ. ಶಂಕ್ರಪ್ಪ, ಡಾ. ಸುಪ್ರಿಯಾ, ಡಾ. ಮಹೇಶ್, ಡಾ. ರಾಘವೇಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net