ಸೇವಾಲಾಲ್ ಜಯಂತಿ ಅದ್ದೂರಿ ಅಚರಣೆ

03ydg01
Published on

ಯಾದಗಿರಿ: ಜಿಲ್ಲಾಡಳಿತದಿಂದ ಸಂತ ಸೇವಾಲಾಲ್ ಮಹರಾಜರ ಜಯಂತ್ಯುತ್ಸವವನ್ನು ಜಿಲ್ಲಾದ್ಯಂತ ಫೆ,15 ರಂದು ವಿಜೃಂಭಣೆ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ತಿಳಿಸಿದರು.

ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ನಡೆಯುವ ಜಿಲ್ಲಾಮಟ್ಟದ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ವಹಿಸಲಾದ ಕೆಲಸ-ಕಾರ್ಯಗಳನ್ನು ಅಚ್ಚುಕಟ್ಟಾಗಿ, ಯಾವುದೇ ಲೋಪ ಆಗದಂತೆ ಜವಾಬ್ದಾರಿಯಿಂದ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅದೇ ರೀತಿ ಫೆ.19ರಂದು ಛತ್ರಪತಿ ಮಹಾರಾಜರ ಜಯಂತಿ ಮತ್ತು 20 ರಂದು ಮಹಾಕವಿ ಸರ್ವಜ್ಞರ ಜಯಂತಿಯನ್ನು ನಗರದ ವಿದ್ಯಾಮಂಗಲ ಕಾಯರ್ಾಲಯದಲ್ಲಿ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಶಿಷ್ಠಾಚಾರ ಪಾಲನೆ, ಅತಿಥಿ ಗಣ್ಯರನ್ನು, ನುರಿತ ಉಪನ್ಯಾಸಕರನ್ನು ಆಹ್ವಾನಿಸುವುದು ಸೇರಿ ಎಲ್ಲ ರೀತಿಯ ಸೌಕರ್ಯ ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳಬೇಕು.ಕುಡಿಯುವ ನೀರು, ವಿದ್ಯುತ್ ಅಲಂಕಾರ, ಧ್ವನಿವರ್ಧಕ, ಸ್ವಚ್ಛತೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ನಿದರ್ೇಶನ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net