ಸೇವೆ ಕಾಯಂಗಾಗಿ ಸಚಿವರಿಗೆ ಮನವಿ

Manavi
Published on

ಚಿತ್ರದುರ್ಗ: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ, ಸ್ಪಂದಿಸುವಂತೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಶನಿವಾರ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಜಿ.ಎನ್.ಯಶೋಧರ, ಉಪಾಧ್ಯಕ್ಷೆ ಡಿ.ಎಂ.ಚಂದನಾ, ಕಾರ್ಯದರ್ಶಿ ವಿ.ಎಸ್.ಮಂಜುನಾಥ್, ಖಜಾಂಚಿ ಜಗದೀಶ್ ಕರೆ, ಪದಾಧಿಕಾರಿಗಳಾದ ನಂದಿನಿ, ಫಿರ್ದೋಸ್, ಸುವರ್ಣಾ ದೇವಿ, ಮಹಾಂತೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net