ಸೇವೆಯಿಂದ ನಾಲ್ವರು ಶಿಕ್ಷಕರ ಅಮಾನತು

Suspend
Published on

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ನಕಲು ನಡೆಯುತ್ತಿದ್ದರೂ ಕ್ರಮ ಜರುಗಿಸದೆ ಕರ್ತವ್ಯ ಲೋಪ ಎಸಗಿದ ಆ ರೋಪದಡಿ ಕೊಠಡಿ ಮೇಲ್ವಿಚಾರಕರಾಗಿದ್ದ ನಾಲ್ವರು ಶಿಕ್ಷಕರನ್ನು ಶಿಕ್ಷಣ ಇಲಾಖೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಶನಿವಾರ ವಿಜ್ಞಾನ ವಿಷಯ ಪರೀಕ್ಷೆಗೆ ಸಂಬಂಧಿಸಿದಂತೆ ಚಳ್ಳಕೆರೆ ತಾಲೂಕು ಪರಶುರಾಮಪುರ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದ ಕೊಠಡಿ ಸಂಖ್ಯೆ 16ರಲ್ಲಿ ಕರ್ತವ್ಯದಲ್ಲಿದ್ದ ಪಿ.ಓಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಚಂದ್ರಶೇಖರ್,ಕೊಠಡಿ ಸಂ ಖ್ಯೆ18ರಲ್ಲಿದ್ದ ಕೊರ‌್ಲಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಪ್ರಕಾಶ್,ಕೊಠಡಿ ಸಂಖ್ಯೆ1ರಲ್ಲಿದ್ದ ಮಂಜರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ರೇವಣ್ಣ ಹಾಗೂ ಗೋಸಿಕೆರೆ ರಾಧಾಕೃಷ್ಣ ಪ್ರೌಢಶಾಲೆ ಶಿಕ್ಷಕ ರಾಘವೇಂದ್ರ ಅವರು,ವಿದ್ಯಾರ್ಥಿಗಳು ನಕಲು ಮಾಡುತ್ತಿ ದ್ದರೂ ಕ್ರಮ ಜರುಗಿಸದೆ ಕರ್ತವ್ಯ ಲೋಪ ಎಸಗಿದ್ದಾರೆ,ಆದ್ದರಿಂದ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಡಿಡಿಪಿಐ ಕೆ.ರವಿಶಂಕರ ರೆಡ್ಡಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net