ಸೈನಿಕರಂತೆ ಕಾರ್ಯನಿರ್ವಹಿಸುವ ಪತ್ರಕರ್ತರು

1ss1sanmana
Published on

ಶನಿವಾರಸಂತೆ: ಸೈನಿಕರಂತೆ ಪತ್ರಕರ್ತರು ಕಾರ್ಯನಿರ್ವಹಿಸುತ್ತಾರೆ ಎಂದು ನಿವೃತ್ತ ಸೇನಾಧಿಕಾರಿ ಮತ್ತು ಶನಿವಾರಸಂತೆ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಎ.ಎಸ್.ಮಹೇಶ್ ಅಭಿಪ್ರಾಯ ಪಟ್ಟರು. ಸಮೀಪದ ಅಂಕನಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ ಸೋಮವಾರಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸೈನಿಕರು ದೇಶದ ರಕ್ಷಣೆಗಾಗಿ ಹೇಗೆ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸುತ್ತಾರೋ ಅದೇ ರೀತಿ ಪತ್ರಕರ್ತರು ಸಹ ಸಮಾಜದ ರಕ್ಷಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಷ್ಟ್ರದ ಆಗುಹೋಗುಗಳ ಬಗ್ಗೆ, ಯುದ್ಧ ನಡೆಯುವ ಸಂದರ್ಭ, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸ್ಥಳಕ್ಕೆ ಮೊದಲು ಮಾಧ್ಯಮ ತಂಡ ಭೇಟಿ ನೀಡಿ ಜನರಿಗೆ ಮಾಹಿತಿ ನೀಡುವ ಕಾರ್ಯ ಸಾಹಸವೇ ಸರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ನಿವೃತ್ತ ಸೇನಾಧಿಕಾರಿ ಎ.ಎಸ್.ಮಹೇಶ್ ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net